ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೂಲಿ ಕಾರ್ಮಿಕರಿದ್ದ ವಾಹನಕ್ಕೆ ಲಾರಿ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

|
Google Oneindia Kannada News

ಶಂಶಾಬಾದ್, ಮಾರ್ಚ್ 28: ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಕೂಲಿಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಶಂಶಾಬಾದ್‌ನಲ್ಲಿ ನಡೆದಿದೆ.

Recommended Video

Telangana Police Inspector Kicks Man Grieving Over His daughter body | Telangana Police

ಮೃತರು ರಾಯಚೂರು ಮೂಲದವರಾಗಿದ್ದಾರೆ.ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ KA 36 B 8264 ನಂಬರಿನ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು.

ದಂಡ ಹೆಚ್ಚಿಸಿದ್ದೇ ಹೆಚ್ಚಿಸಿದ್ದು ರಸ್ತೆ ಅಪಘಾತ ಗಣನೀಯ ಕಮ್ಮಿ ದಂಡ ಹೆಚ್ಚಿಸಿದ್ದೇ ಹೆಚ್ಚಿಸಿದ್ದು ರಸ್ತೆ ಅಪಘಾತ ಗಣನೀಯ ಕಮ್ಮಿ

ಘಟನೆಯಲ್ಲಿ ಮೂವರು ಮಹಿಳೆಯರು, ಬಾಲಕಿ, ಬಾಲಕ ಸೇರಿ ಒಟ್ಟು ಐವರು ಮೃತಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಚಾಲಕ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

5 Persons Died After Collision Between Lorry And Mini Truck In Shamshabad

ಶಂಶಾಬಾದ್ ಬಳಿ ವೇಗವಾಗಿ ಬಂದ GJ 06 BT 0823 ನಂಬರಿನ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಐವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಆರ್ ವೆಂಕಟೇಶ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

5 Persons Died After Collision Between Lorry And Mini Truck In Shamshabad

ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶದಲ್ಲಿ ಲಾಕ್‌ಡೌನ್ ಇದ್ದರೂ ಜನರ ಓಡಾಟ ಮಾತ್ರ ಕಡಿಮೆಯಾಗಿಲ್ಲ.

English summary
5 persons died and 6 injured after collision between lorry and mini truck in Shamshabad,Telangana. Mini-truck was carrying 30 people who were going to Raichur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X