ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯವಾಡ: ಬಸ್ ಕಾಲುವೆಗೆ ಉರುಳಿ 8 ಸಾವು, 30 ಜನರಿಗೆ ಗಾಯ

ಮಂಗಳವಾರ ಬೆಳಗ್ಗೆ ದಿವಾಕರನ್ ಟ್ರಾವೆಲ್ಸ್ ಬಸ್ ವೊಂದು ಕೃಷ್ಣ ಜಿಲ್ಲೆಯ ಮುಲಪಡು ಬಳಿ ಕಾಲುವೆಗೆ ಉರುಳಿ ಬಿದ್ದ ಪರಿಣಾಮ 8 ಜನರು ಸಾವನ್ನಪ್ಪಿದ್ದು 30ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

By Ramesh
|
Google Oneindia Kannada News

ವಿಜಯವಾಡ, ಫೆಬ್ರವರಿ. 28 : ಹೈದರಾಬಾದ್‍ ಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್‍ ವೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಮುಲಪಡು ಬಳಿ ನಡೆದಿದೆ.

ಭುವನೇಶ್ವರದಿಂದ ಹೈದರಾಬಾದ್‍ ಗೆ ತೆರಳುತ್ತಿದ್ದ ದಿವಾಕರ್ ವೋಲ್ವೋ ಬಸ್ ಕೃಷ್ಣ ಜಿಲ್ಲೆಯ ಮುಲಪಡು ಬಳಿ ಕಾಲುವೆ ಸೇತುವೆಯ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಸೇತುವೆ ಮೇಲಿಂದ ಕಾಲುವೆಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು ಸುಮಾರು 30 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಂದಿಗಾಮ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

8 Dead, 30 Injured After Bus Plunges Into Canal In Andhra Pradesh

ಗ್ಯಾಸ್ ಕಟ್ಟರ್ ಗಳನ್ನು ಬಳಸಿ ಬಸ್‍ ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದು, ಆತನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

English summary
A private bus fell off a bridge into a canal in Mulapadu Krishna district,Andhra Pradesh on February 28, killing 8 people and leaving over 30 injured. The driver was allegedly drowsy and lost control of the Volvo bus, which was heading from Bhubaneswar to Hyderabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X