ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 80 ಸಿಬ್ಬಂದಿಗೆ ಕೋವಿಡ್

ಹೈದರಾಬಾದ್, ಸೆಪ್ಟೆಂಬರ್ 08 : ತೆಲಂಗಾಣ ರಾಜ್ಯದ ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ 80 ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,45,163.

Recommended Video

      Siddharaj kalyankar , ಹಿರಿಯ ಧಾರವಾಹಿ ಹಾಗು ಚಲನಚಿತ್ರ ನಟ ಇನ್ನಿಲ್ಲ | Oneindia Kannada

      ಅಕಾಡೆಮಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 80 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಸೆಪ್ಟೆಂಬರ್ 4ರಂದು ಅಕಾಡೆಮಿಯಲ್ಲಿ 2018ರ ತರಬೇತಿ ಪೂರ್ಣಗೊಳಿಸಿದ 131 ಐಪಿಎಸ್ ಅಧಿಕಾರಿಗಳ ಪರೇಡ್ ನಡೆದಿತ್ತು.

      'ಕೋವಿಡ್ ಸೋಂಕು ತಗುಲಿರುವ ಸಿಬ್ಬಂದಿ 131 ಜನರ ತರಬೇತಿ ಮತ್ತು ಪರೇಡ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಹಂತ-ಹಂತವಾಗಿ ಸಿಬ್ಬಂದಿಗೆ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ' ಎಂದು ಅಧಿಕಾರಿಗಳು ಹೇಳಿದ್ದಾರೆ.

      80 Staff Of National Police Academy Tested Positive For Covid 19

      ಸಿಬ್ಭಂದಿಗೆ ಕೋವಿಡ್ ಸೋಂಕು ತಗುಲಿದ ಪರಿಣಾಮ ಅಕಾಡೆಮಿಗೆ ಜನರ ಪ್ರವೇಶ ನಿಷೇಧಿಸಲಾಗಿದೆ. ಸಿಬ್ಬಂದಿ ಹೊರುತುಪಡಿಸಿ ಬೇರೆ ಯಾರೂ ಸಹ ಆಗಮಿಸುವಂತಿಲ್ಲ ಎಂದು ತಿಳಿಸಲಾಗಿದೆ.

      ಸೋಂಕು ತಗುಲಿದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಅಕಾಡೆಮಿ ನಡೆಸಲು ಅಗತ್ಯ ಇರುವಷ್ಟು ಸಿಬ್ಬಂದಿ ಮಾತ್ರ ಕೆಲಸಕ್ಕೆ ಹಾಜರಾಗಲು ಸೂಚಿಸಲಾಗಿದೆ. ಎಲ್ಲಾ ಸಿಬ್ಬಂದಿಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ.

      131 ಐಪಿಎಸ್ ಅಧಿಕಾರಿಗಳಿಗೆ ತರಬೇತಿ ನೀಡಿದ ಯಾವ ಸಿಬ್ಬಂದಿಗೂ ಕೋವಿಡ್ ಸೋಂಕು ತಗುಲಿಲ್ಲ ಎಂದು ಅಕಾಡೆಮಿ ಸ್ಪಷ್ಟಪಡಿಸಿದೆ. ತುರ್ತು ಅಲ್ಲದ ಎಲ್ಲಾ ಚಟುವಟಿಕೆಗಳನ್ನು ಅಕಾಡೆಮಿಯಲ್ಲಿ ಮುಂದೂಡಲಾಗಿದೆ.

      ತೆಲಂಗಾಣದಲ್ಲಿ ಸೋಮವಾರ 1802 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1,42,771. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 31,635.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+