ಹೈದರಾಬಾದ್ ಚಿತ್ರಮಂದಿರದಲ್ಲಿ ಯುವತಿ ಮೇಲೆ ಅತ್ಯಾಚಾರ
ಹೈದರಾಬಾದ್, ಫೆಬ್ರವರಿ 2: ಚಿತ್ರಮಂದಿರದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದಿನಲ್ಲಿ ಶುಕ್ರವಾರ ನಡೆದಿದೆ.
ಹೈದರಾಬಾದ್ ನಲ್ಲಿ ಪದ್ಮಾವತಿ ಚಿತ್ರದ ಮ್ಯಾಟನಿ ಶೋ ವೀಕ್ಷಿಸಲು ತೆರಳಿದ್ದ 19 ವರ್ಷದ ಯುವತಿ ಮೇಲೆ ಕಾರು ಚಾಲಕ ಅತ್ಯಾಚಾರವೆಸಗಿದ್ದಾನೆ. ಚಿತ್ರಮಂದಿರಲ್ಲಿ ಕೆಲವೇ ಕೆಲವರು ಮಾತ್ರ ಚಿತ್ರ ವೀಕ್ಷಣೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಯುವತಿ ಬಾಲ್ಕನಿಯಲ್ಲಿ ಕುಳಿತು ಚಿತ್ರ ವೀಕ್ಷಿಸುತ್ತಿದ್ದಳು, ಯಾರೂ ಇಲ್ಲದನ್ನು ಗಮನಿಸಿದ ಭಿಕ್ಷುಪತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ನಂತರ ಯುವತಿ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಕಾಮುಕನ ವಿರುದ್ಧ ದೂರು ದಾಖಲಿಸಿದ್ದಾಳೆ ಹಾಗೂ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೊಲೀಸರು ಕಾರು ಚಾಲಕ ಭಿಕ್ಷುಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications