ಬ್ಯಾಂಕ್ ನವರನ್ನೇ ಯಾಮಾರಿಸಲು ಯತ್ನಿಸಿದ ವ್ಯಕ್ತಿಯ ಬಂಧನ
ಎರಡು ಸಾವಿರ ಮತ್ತು ಐನೂರು ಮುಖಬೆಲೆಯ ನಕಲಿ ನೋಟುಗಳನ್ನು ಬ್ಯಾಂಕಿಗೆ ಜಮಾ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್, ಮಾರ್ಚ್. 14 : ಎರಡು ಸಾವಿರ ಮತ್ತು ಐನೂರು ಮುಖಬೆಲೆಯ ನಕಲಿ ನೋಟುಗಳನ್ನು ಬ್ಯಾಂಕಿಗೆ ಜಮಾ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಯೂಸೂಫ್ ಶೇಖ್ ಎಂಬ ವ್ಯಕ್ತಿ ಮಲ್ಕಾಜಗಿರಿಯದ ಅಲಹಾಬಾದ್ ಬ್ಯಾಂಕಿನಲ್ಲಿ ನಕಲಿ ನೋಟುಗಳನ್ನು ಜಮಾ ಮಾಡಲು ಬ್ಯಾಂಕಿಗೆ ಬಂದಿದ್ದಾನೆ.[ಹೈದರಾಬಾದ್: 1.2 ಕೋಟಿ ಹಳೆ ನೋಟು ವಿನಿಮಯ, 16 ಜನರ ಬಂಧನ]

ಸಂದೇಹಗೊಂಡ ಬ್ಯಾಂಕ್ ಸಿಬ್ಬಂದಿ ನೋಟಿನ ಪರಿಶೀಲನೆ ನಡೆಸಿದ ವೇಳೆ 2000 ಮತ್ತು 500 ರ ಮುಖಬೆಲೆಯ 9.9 ಲಕ್ಷ ರು ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿವೆ.
ಹಣ ಎಣಿಕೆ ಮಾಡುತ್ತಿದ್ದ ಕ್ಯಾಶಿಯರ್ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಚಿಲ್ರ್ಡನ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂದು ನೋಟಿನ ಮೇಲೆ ನಮೂದಾಗಿರುವುದು ಕಾಣಿಸಿದೆ. ಕೂಡಲೇ ಬ್ಯಾಂಕ್ ಮ್ಯಾನೇಜರ್ಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ.
Hyderabad: A man arrested for trying to deposit Rs 9.90 lakhs of fake new Rs 500 & Rs 2000 notes in a bank in Malkajgiri area. pic.twitter.com/u5uYahmaNw
— ANI (@ANI_news) March 14, 2017
ಶೇಖ್ ಗೆ ಅನುಮಾನ ಬಾರದಂತೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬ್ಯಾಂಕಿಗೆ ಆಗಮಿಸಿದ ಕುಶೈಗುಡಾ ಪೊಲೀಸರು ಶೇಖ್ ನನ್ನು ವಶಕ್ಕೆ ಪಡೆದಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications