ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಟ್ರೋ ಪ್ರಯಾಣಕ್ಕೆ ಆರೋಗ್ಯ ಸೇತು, ಮಾಸ್ಕ್ ಕಡ್ಡಾಯ

|
Google Oneindia Kannada News

ಹೈದರಾಬಾದ್, ಜೂನ್ 16 : ಹೈದರಾಬಾದ್‌ನಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 3,385.

Recommended Video

ರೈತರ ಪಾಲಿಗೆ ಉತ್ತಮ ಫಸಲನ್ನು ನೀಡಲಿದೆ 2020 | Oneindia Kannada

ಮೆಟ್ರೋದಲ್ಲಿ ಸಂಚಾರ ನಡೆಸುವ ಜನರಿಗೆ ಆರೋಗ್ಯ ಸೇತು ಅಪ್ಲಿಕೇಶನ್ ಕಡ್ಡಾಯವಾಗಿದೆ. ಪ್ರಯಾಣ ಮಾಡುವಾಗ ಮಾಸ್ಕ್ ಧರಿಸಬೇಕು ಎಂದು ಮಾರ್ಗಸೂಚಿ ಸಿದ್ಧಪಡಿಸಲಾಗುತ್ತದೆ. ಈಗಾಗಲೇ ದೇಶಿಯ ವಿಮಾನದಲ್ಲಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಆರೋಗ್ಯ ಸೇತು ಅಪ್ಲಿಕೇಶನ್ ಕಡ್ಡಾಯಗೊಳಿಸಲಾಗಿದೆ.

ಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್‌ ಹೆಸರು: ಸಿಎಂಗೆ ಮನವಿಮೆಟ್ರೋ ನಿಲ್ದಾಣಕ್ಕೆ ಶಂಕರ್ ನಾಗ್‌ ಹೆಸರು: ಸಿಎಂಗೆ ಮನವಿ

ಕೇಂದ್ರ ಸರ್ಕಾರ ಅನುಮತಿ ನೀಡುತ್ತಿದ್ದಂತೆ ಹೈದರಾಬಾದ್‌ನಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿದೆ. ಮೆಟ್ರೋ ನಿಲ್ದಾಣದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಬೆಂಗಳೂರು; ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಾರ್ಗಸೂಚಿ ಬೆಂಗಳೂರು; ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಾರ್ಗಸೂಚಿ

Aarogya Setu Mask Mandatory For Metro Passengers

ಪ್ರತಿಗಂಟೆಗೊಮ್ಮೆ ಮೆಟ್ರೋ ನಿಲ್ದಾಣವನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ನಿಲ್ದಾಣದಲ್ಲಿ ಕಾರ್ಯ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ಪಿಪಿಇ ಕಿಟ್‌ಗಳನ್ನು ನೀಡಲಾಗುತ್ತದೆ. ಎಲ್ಲಾ ನಿಲ್ದಾಣದಲ್ಲಿ ತುರ್ತು ಅಗತ್ಯಕ್ಕಾಗಿ ಐಸೋಲೇಷನ್ ವಾರ್ಡ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ.

ಹೈದರಾಬಾದ್; ಗೋಕುಲ್ ಚಾಟ್ ಮಾಲೀಕನಿಗೆ ಕೊರೊನಾ ಸೋಂಕು ಹೈದರಾಬಾದ್; ಗೋಕುಲ್ ಚಾಟ್ ಮಾಲೀಕನಿಗೆ ಕೊರೊನಾ ಸೋಂಕು

ರೈಲಿನಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಲು ಸೀಟುಗಳಿಗೆ ಮಾರ್ಕ್ ಮಾಡಲಾಗುತ್ತದೆ. ನಿಲ್ದಾಣದ ಸಿಬ್ಬಂದಿಗೆ ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ನೋಡಿಕೊಳ್ಳಲು ತರಬೇತಿ ನೀಡಲಾಗುತ್ತದೆ.

ಆರೋಗ್ಯ ಸೇತು ಅಪ್ಲಿಕೇಶನ್‌ ಸುರಕ್ಷಿತವಾಗಿದ್ದಾರೆ ಎಂದು ತೋರಿಸಿದ ವ್ಯಕ್ತಿಗೆ ಮಾತ್ರ ಮೆಟ್ರೋ ಹತ್ತಲು ಅನುಮತಿ ನೀಡಲಾಗುತ್ತದೆ. ಮಾಸ್ಕ್ ಇಲ್ಲದ ವ್ಯಕ್ತಿ ನಿಲ್ದಾಣಕ್ಕೆ ಪ್ರವೇಶಿಸುವಂತಿಲ್ಲ. ಶೀಘ್ರದಲ್ಲಿಯೇ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದೆ.

English summary
Aarogya Setu app and mask mandatory for the passengers in Hyderabad metro. Services may resume in city after approved given by union govt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X