ರಾಮಮಂದಿರ ಕುರಿತ ಶಾ ಹೇಳಿಕೆ: ಮಾಧ್ಯಮ ವರದಿ ಸುಳ್ಳು ಎಂದ ಬಿಜೆಪಿ

ಹೈದರಾಬಾದ್, ಜುಲೈ 14: '2019 ಲೊಕಸಭಾ ಚುನಾವಣೆಗೂ ಮುನ್ನವೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ' ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಬಿಜೆಪಿ ತಳ್ಳಿಹಾಕಿದೆ.

ತೆಲಂಗಾಣದ ಹೈದರಾಬಾದಿನಲ್ಲಿ ಬಿಜೆಪಿ ಮುಖಂಡರೊಂದಿಗೆ ಸಭೆ ನಡೆಸಿದ ಅಮಿತ್ ಶಾ, 2019 ರ ಲೋಕಸಭಾ ಚುನಾವಣೆಗೂ ಮುನ್ನ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಅಮಿತ್ ಶಾ ಈ ಬಗ್ಗೆ ಖಚಿತವಾಗಿ ಮಾತನಾಡಿಲ್ಲ. ನಮ್ಮ ಅಜೆಂಡಾದಲ್ಲಿ ಈ ವಿಷಯ ಪ್ರಸ್ತಾಪವಾಗಿಲ್ಲ ಎಂದು ಬಿಜೆಪಿ ಹೇಳಿದೆ.

Amit Shah on Ram Mandir: BJP denies media reports

ಹೈದರಾಬಾದಿನಲ್ಲಿ ಶುಕ್ರವಾರವಿಡಿ ಬಿಜೆಪಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅಮಿತ್ ಶಾ, ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ನಡೆಸುವ ವದಂತಿಯೂ ಸುಳ್ಳು ಎಂದರು. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+