ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 15 ಜನರ ದುರ್ಮರಣ

ಕರ್ನೂಲು, ಮೇ 11: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ವೆಲದುರ್ತಿ ಎನ್ನುವಲ್ಲಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 15 ಮಂದಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ SRS ಸಂಸ್ಥೆಯ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಹಲವು ಜನರು ಗಾಯಗೊಂಡಿದ್ದಾರೆಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಅನಂತಪುರಂನಲ್ಲಿ ಮದುವೆ ಸಮಾರಂಭ ಮುಗಿಸಿ ತಮ್ಮ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟ ಮತ್ತು ಗಾಯಗೊಂಡ ಎಲ್ಲರೂ ಒಂದೇ ಕುಟುಂಬದ ಸದಸ್ಯರಾಗಿದ್ದು, ಕರ್ನೂಲ್ ಜಿಲ್ಲೆಯ ರಾಮಪುರಂ ಗ್ರಾಮದವರು ಎಂದು ವೆಲದರ್ತಿ ಪೊಲೀಸರು ತಿಳಿಸಿದ್ದಾರೆ.

Andhra Pradesh: 15 dead and several injured after two vehicles collided in Veldurthi of Kurnool district today. More details awaited

ವೆಲದುರ್ತಿಯಿಂದ ಬೆಂಗಳೂರು - ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ (NH 44) ಪ್ರವೇಶಿಸುವ ವೇಳೆ, ಖಾಸಗಿ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಗಾಯಗೊಂಡವರನ್ನು ಕರ್ನೂಲ್ ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಪ್ರಧಾನಿ ತೀವ್ರ ವಿಷಾದ ವ್ಯಕ್ತ ಪಡಿಸಿದ್ದಾರೆ.

ಮೃತಪಟ್ಟವರ ಹೆಸರು, ವಿಳಾಸ ಸೇರಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+