ಪ್ರಧಾನಿ ಮೋದಿ-ಟ್ರಂಪ್ ಮಾತುಕತೆಯ ಅಗತ್ಯವೇನಿತ್ತು? ಒವೈಸಿ ಕಿಡಿ

ಹೈದರಾಬಾದ್, ಆಗಸ್ಟ್ 20: ಕಾಶ್ಮೀರ ಒಂದು ದ್ವಿಪಕ್ಷೀಯ ವಿಷಯ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಆದರೆ ಕಾಶ್ಮೀರದ ವಿಷಯದಲ್ಲಿ ಈ ನಿರ್ಧಾರ ತೆಗೆದುಕೊಂಡ ಭಾರತ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡುವ ಅಗತ್ಯವೇನಿತ್ತು ಎಂದು ಎಐಎಂಐಎಂ ನಾಯಕ ಅಸಾದುದ್ದಿನ್ ಒವೈಸಿ ಪ್ರಶ್ನಿಸಿದ್ದಾರೆ.

"ಕಾಶ್ಮೀರ ಒಂದು ದ್ವಿಪಕ್ಷಿಯ ವಿಷಯ ಎಂಬುದನ್ನು ನಾವು ಎಂದಿನಿಂದಲೋ ಹೇಳುತ್ತ ಬಂದಿದ್ದೇವೆ. ಅದು ಈ ಎರಡು ದೇಶಗಳಿಗೆ ಮಾತ್ರ ಸಂಬಂಧಿಸಿದ ದ್ವಿಪಕ್ಷೀಯ ವಿಷಯ ಎಂದಾದರೆ ಪ್ರಧಾನಿ ಮೋದಿ ಅವರು ಟ್ರಂಪ್ ಅವರಿಗೆ ಕರೆ ಮಾಡಿ, ದೂರು ನೀಡುವ ಅಗತ್ಯವೇನಿತ್ತು?" ಎಂದು ಹೈದರಾಬಾದ್ ಸಂಸದ ಒವೈಸಿ ಪ್ರಶ್ನಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಭಾರತ ಸರ್ಕಾರದ ನಡೆಯ ನಂತರ ಗಡಿಯಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ ಎಂದು ಪಾಕಿಸ್ತಾನ ದೂರಿದ್ದು, ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಫೋನಿನಲ್ಲಿ ಮಾತುಕತೆ ನಡೆಸಿದ್ದರು.

Asaduddin Owaisi on PM Modis phone call to US President Donald Trump

ಈ ಬೆಳವಣಿಗೆಯ ನಂತರ ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರು ಸುಮಾರು 30 ನಿಮಿಷಗಳ ಫೋನಿನಲ್ಲಿ ಮಾತುಕತೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ ಉಭಯ ನಾಯಕರೂ ಭಾರತ-ಅಮೆರಿಕ ನಡುವಿನ ಆರ್ಥಿಕ ಸಂಬಂಧದ ಕುರಿತು ಹೆಚ್ಚಿನ ಮಾತುಕತೆ ನಡೆಸಿದ್ದು, ಪಾಕಿಸ್ತಾನದ ವಿಷಯ ಪ್ರಸ್ತಾಪವಾದ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಆದರೆ ಡೊನಾಲ್ಡ್ ಟ್ರಂಪ್ ಭಾರತ್ ಮತ್ತು ಪಾಕಿಸ್ತಾನ ಎರಡೂ ದೇಶಗಳ ಪ್ರಧಾನಿಗಳಿಗೆ ಉದ್ವಿಗ್ನತೆಯನ್ನು ಶಮನಗೊಳಿಸುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+