ಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯಿಂದ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅಮಾನತು

ಹೈದರಾಬಾದ್, ಆಗಸ್ಟ್ 23: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಅವರನ್ನು ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ ಶೋಕಾಸ್ ನೀಡಿದ್ದು, ಉತ್ತರ ನೀಡಲು ಪಕ್ಷವು 10 ದಿನಗಳ ಕಾಲಾವಕಾಶ ನೀಡಿದೆ.

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಬಿಜೆಪಿ ಶಾಸಕರು ಪ್ರವಾದಿಯವರ ಬಗ್ಗೆ ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ಭುಗಿಲೆದ್ದಿದ್ದವು. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 (ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಹಾಳುಗೆಡವುದು ಅಥವಾ ಅಪವಿತ್ರಗೊಳಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಅವರನ್ನು ಬಂಧಿಸಲಾಯಿತು.

BJP suspends Telangana MLA T Raja Singh for his controversial remarks on Prophet Muhammad

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಟಿ ರಾಜಾ ಸಿಂಗ್ ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಅವರನ್ನು ಬಂಧಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರ ಹೇಳಿಕೆಯ ನಂತರ ಟಿ ರಾಜಾ ಸಿಂಗ್ ಬೆಳಕಿಗೆ ಬಂದಿದ್ದಾರೆ. ಇವರ ಹೇಳಿಕೆಯಿಂದಾಗಿ ಅವರ ವಿರುದ್ಧ ಪ್ರತಿಭಟನೆಗಳು ಶುರುವಾಗಿವೆ. ಪ್ರತಿಭಟನೆ ಮತ್ತು ಜನರ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ ಅವರನ್ನು ಇಂದು ಬಂಧಿಸಲಾಗಿದೆ.

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಧರ್ಮನಿಂದೆಯ ಹೇಳಿಕೆಗಾಗಿ ಇಂದು ಬೆಳಗ್ಗೆ ಹೈದರಾಬಾದ್ ದಕ್ಷಿಣ ವಲಯ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸಿಂಗ್ ಅವರು ಗೋಶಾಮಹಲ್‌ನ ಶಾಸಕರಾಗಿದ್ದು ಅವರು ಇತ್ತೀಚೆಗೆ ಅಪ್‌ಲೋಡ್ ಮಾಡಿದ ವಿಡಿಯೊದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಹಲವಾರು ಪ್ರತಿಭಟನೆಗಳು ಭುಗಿಲೆದ್ದಿವೆ.

BJP suspends Telangana MLA T Raja Singh for his controversial remarks on Prophet Muhammad

ಸಿಟ್ಟಿಗೆದ್ದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದಬೀರ್‌ಪುರ, ಭವಾನಿನಗರ, ರೇನ್‌ಬಜಾರ್ ಮತ್ತು ಮಿರ್‌ಚೌಕ್ ಪೊಲೀಸ್ ಠಾಣೆಗಳಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿದೆ. ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ಸಿಂಗ್ ವಿರುದ್ಧ ಜನರು ಪ್ರತಿಭಟಿಸಿದ್ದಾರೆ ಮತ್ತು ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು.

ಘಟನೆ ಹಿನ್ನೆಲೆ: ಆಗಸ್ಟ್ 19 ರಂದು ಹೈದರಾಬಾದ್‌ನಲ್ಲಿ ಹಾಸ್ಯನಟ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮದ ಮೊದಲು ರಾಜಾ ಸಿಂಗ್ ಮತ್ತು ಇತರ 4 ಜನರನ್ನು ರಕ್ಷಣಾತ್ಮಕ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಕಳೆದ ವಾರ, ತೆಲಂಗಾಣ ರಾಷ್ಟ್ರ ಸಮಿತಿಯ ಆಡಳಿತದಲ್ಲಿರುವ ತೆಲಂಗಾಣ ಸರ್ಕಾರವು ಫರುಕಿ ನಗರದಲ್ಲಿ ಪ್ರದರ್ಶನ ನೀಡಲು ಅವಕಾಶ ನೀಡಿದರೆ, ಹಾಸ್ಯನಟನ ಮೇಲೆ ಹಲ್ಲೆ ನಡೆಸುವುದಾಗಿ ಮತ್ತು ಸ್ಥಳವನ್ನು ಸುಟ್ಟು ಹಾಕುವುದಾಗಿ ಸಿಂಗ್ ಬೆದರಿಕೆ ಹಾಕಿದ್ದರು. ಈ ಕಾರಣದಿಂದಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೊ ಸಂದೇಶದಲ್ಲಿ, ಬಿಜೆಪಿ ಶಾಸಕರು ಮಾತನಾಡಿ, ಕಾಮಿಡಿಯನ್ ಮುನಾವರ್, ಹಿಂದೂ ದೇವರುಗಳ ಮೇಲೆ ಹಾಸ್ಯ ಮಾಡಿದ್ದಾರೆ ಮತ್ತು ಹೈದರಾಬಾದ್‌ನಲ್ಲಿ ಪ್ರದರ್ಶನಕ್ಕೆ ಅನುಮತಿ ನೀಡಬಾರದು ಎಂದು ಕರೆ ನೀಡಿದ್ದರು. ಜನವರಿ 9 ರಂದು ತೆಲಂಗಾಣ ರಾಜಧಾನಿಯಲ್ಲಿ ಪ್ರದರ್ಶನ ನೀಡಬೇಕಿತ್ತು. ಆದರೆ ದಕ್ಷಿಣ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಪ್ರದರ್ಶನವನ್ನು ರದ್ದುಗೊಳಿಸಲಾಯಿತು. ಆಗಲೂ ತೆಲಂಗಾಣ ಬಿಜೆಪಿ ಫರೂಕಿ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

"ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ನಡೆಸಲು ಅವರನ್ನು ಆಹ್ವಾನಿಸಿದರೆ ಏನಾಗುತ್ತದೆ ಎಂದು ಅವರು ನೋಡಲಿ. ಎಲ್ಲೇ ಕಾರ್ಯಕ್ರಮ ನಡೆದರೂ ಆತನನ್ನು ಥಳಿಸುತ್ತೇವೆ. ಯಾರೇ ಅವರಿಗೆ ಸ್ಥಳವನ್ನು ನೀಡಿದರೆ, ನಾವು ಅಲ್ಲಿ ಬೆಂಕಿ ಹಚ್ಚುತ್ತೇವೆ'' ಎಂದು ಸಿಂಗ್ ವಿಡಿಯೊದಲ್ಲಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+