ಸಿಎಂ ವಿರುದ್ಧ ಚುನಾವಣೆ ಸ್ಪರ್ಧಿಸಿದ್ದ ವ್ಯಕ್ತಿ ನಾಪತ್ತೆ, ರಾಜಕೀಯ ಕೈವಾಡ ಶಂಕೆ

ಹೈದರಾಬಾದ್, ನವೆಂಬರ್ 27: ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಅನುಮಾನಾಸ್ಪದವಾಗಿ ಕಣ್ಮರೆ ಆಗಿದ್ದಾನೆ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂದು ಕೆಲವರು ಆರೋಪಿಸಿದ್ದಾರೆ.

ಕೆ.ಚಂದ್ರಶೇಖರ್ ರಾವ್ ವಿರುದ್ಧ ಗಜ್ವಾಲ ವಿಧಾನಸಭೆ ಕ್ಷೇತ್ರದಲ್ಲಿ ಸಮಾಜವಾದಿ ಫ್ರಂಟ್ ಬ್ಲಾಕ್‌ ಪಕ್ಷದ ವತಿಯಿಂದ ಸ್ಪರ್ಧಿಸಿದ್ದ ಕೆ.ದಿನೇಶ್ ಚಕ್ರವರ್ತಿ ಅವರು ನಾಮಪತ್ರ ಸಲ್ಲಿಸಿದ ದಿನದಿಂದಲೂ ಅವರು ಕಣ್ಮರೆ ಆಗಿದ್ದಾರೆ.

ಹೆಬಿಸ್ ಕಾರ್ಪಿಯಸ್ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ದಿನೇಶ್ ಚಕ್ರವರ್ತಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Candidate Fighting Against KCR in Telangana is Missing

ದಿನೇಶ್ ಅವರು ಹಲವು ವರ್ಷಗಳಿಂದ ಕೆ.ಚಂದ್ರಶೇಖರ್ ರಾವ್ ಅವರ ವಿರುದ್ಧ ಹೋರಾಡುತ್ತಾ ಬಂದಿದ್ದರು. ಹಾಗಾಗಿ ಅವರ ಕಣ್ಮರೆ ಹಿಂದೆ ರಾಜಕೀಯ ಕೈವಾಡ ಇದೆ ಎಂದು ದಿನೇಶ್ ಅವರ ಬೆಂಬಲಿಗರು ಆರೋಪಿಸಿದ್ದಾರೆ.

ನವೆಂಬರ್ 23 ರಂದು ಅಭ್ಯರ್ಥಿಯು ನಾಮಪತ್ರ ಸಲ್ಲಿಸಿದ್ದರು. ಆದರೆ ಅಂದಿನಿಂದಲೂ ದಿನೇಶ್ ಕಾಣುತ್ತಿಲ್ಲ. ಡಿಸೆಂಬರ್ 7 ರಂದು ತೆಲಂಗಾಣ ವಿಧಾನಸಭೆ ಚುನಾವಣೆ ಇದ್ದು, ಡಿಸೆಂಬರ್ 11 ರಂದು ಮತೆಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+