ಇಫ್ತಾರ್ ವಿವಾದಾತ್ಮಕ ಹೇಳಿಕೆ: ಬಿಜೆಪಿ ಶಾಸಕನ ವಿರುದ್ಧ ದೂರು
ಹೈದರಾಬಾದ್, ಜೂನ್ 12: ಧಾರ್ಮಿಕ ಭಾವನೆಗಳಿಗೆ ನೋವು ಮಾಡಿದ ಆರೋಪದ ಮೇಲೆ ಹೈದರಾಬಾದಿನ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
"ಇಫ್ತಾರ್ ಕೂಟ ಏರ್ಪಡಿಸುವವರೆಲ್ಲರೂ ಮತದ ಭಿಕ್ಷೆ ಬೇಡುವವರು. ಅಂಥ ಕೂಟಗಳಿಗೆ ನಾನು ಎಂದಿಗೂ ತೆರಳುವುದಿಲ್ಲ" ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿತ್ತು.
ಹಲವು ಕಡೆಗಳಲ್ಲಿ ಇಫ್ತಾರ್ ಕೂಟ ಏರ್ಪಡಿಸುವಲ್ಲಿ ಬ್ಯುಸಿಯಾಗಿರುವ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಕ್ರಮವನ್ನು ಅವರು ಈ ವಿಡಿಯೋದಲ್ಲಿ ಖಂಡಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋದ ಆಧಾರದ ಮೇಲೆ, ಅವರು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆಂದು ದೂರಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಲಾಕ್ನುಮ ಪೊಲಿಸ್ ಠಾಣೆಯಲ್ಲಿ ಭಾರತೀಯ ದಂಡಸಂಹಿತೆ 153-A ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications