ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

|
Google Oneindia Kannada News

ಹೈದರಾಬಾದ್, ನವೆಂಬರ್ 13: ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿರುಸಿನ ತಯಾರಿ ನಡೆಯುತ್ತಿದೆ. ಸೋಮವಾರ ರಾತ್ರಿ ಕಾಂಗ್ರೆಸ್, ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

65 ಅಭ್ಯರ್ಥಿಗಳನ್ನು ಒಳಗೊಂಡ ಈ ಪಟ್ಟಿಯಲ್ಲಿ ಹಲವು ಪ್ರಮುಖ ನಾಯಕರು ಟಿಕೆಟ್ ನಿಂದ ವಂಚಿತರಾಗಿದ್ದು, ಬಂಡಾಯದ ಸೂಚನೆಗಳು ಎದ್ದಿವೆ. ತೆಲಂಗಾಣದಲ್ಲಿ ಟಿಡಿಪಿ ಮತ್ತು ಎಡಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ನಿರ್ಧಾರ ಕೈಗೊಂಡಿರುವ ಕಾಂಗ್ರೆಸ್ ಟಿಕೆಟ್ ಹಂಚಿಕೆಯ ವಿಷಯದಲ್ಲೂ ಈ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದೆ. ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಸುಮಾರು 90 ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಲಿದ್ದು, ಇನ್ನುಳಿದ ಸ್ಥಾನಗಳಿಗೆ ಮಿತ್ರಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಿವೆ.

Congress releases first list of candidates for 2018 Telangana assembly elections

ತೆಲಂಗಾಣದಲ್ಲಿ ಮತ್ತೆ ಕೆಸಿಆರ್ ಹವಾ : ಸಮೀಕ್ಷೆ ಫಲಿತಾಂಶ ತೆಲಂಗಾಣದಲ್ಲಿ ಮತ್ತೆ ಕೆಸಿಆರ್ ಹವಾ : ಸಮೀಕ್ಷೆ ಫಲಿತಾಂಶ

119 ಕ್ಷೇತ್ರಗಳ ತೆಲಂಗಾಣ ವಿಧಾನಸಭೆಗೆ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.

English summary
Congress released the first list of 65 candidates late on Monday night for Telangana assembly elections. The decision on constituencies which are in demand from many aspirants has been put on hold.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X