ಕೊರೊನಾ ಲಾಕ್‌ಡೌನ್: ಜೂನ್‌ವರೆಗೆ ವಿಸ್ತರಣೆಗೆ ತೆಲಂಗಾಣ ಸರ್ಕಾರ ಮನವಿ

ಹೈದರಾಬಾದ್, ಏಪ್ರಿಲ್ 6: ಹೈದರಾಬಾದ್, ಏಪ್ರಿಲ್ 6: ತೆಲಂಗಾಣದಲ್ಲಿ ಕೊರೊನಾ ಪ್ರಕರಗಳು ಹೆಚ್ಚಾಗಬಾರದು ಎನ್ನುವ ಕಾರಣಕ್ಕೆ ಲಾಕ್‌ಡೌನ್ ಜೂನ್ 3ರವರೆಗೆ ವಿಸ್ತರಿಸಿ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಬಾರದು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರವು ಏಪ್ರಿಲ್ 14ರವರೆಗೂ ಲಾಕ್‌ಡೌನ್ ಘೋಷಿಸಿತ್ತು.

Coronavirus Lockdown in Telangana To Continue Till June 3

ಆದರೆ ತೆಲಂಗಾಣದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 3ರವರೆಗೂ ಲಾಕ್‌ಡೌನ್ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಏಪ್ರಿಲ್ 5ರ ಮಾಹಿತಿ ಪ್ರಕಾರ 62 ಕೊರೊನಾ ವೈರಸ್ ಹೊಸ ಪ್ರಕರಣಗಳು ದಾಖಲಾಗಿತ್ತು. ಒಟ್ಟು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 289ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ನಿಂದ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಇನ್ನಷ್ಟು ಮಂದಿಗೆ ಹರಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ತೆಲಂಗಾಣ ಸರ್ಕಾರವು ಮೊಬೈಲ್ ಅಪ್ಲಿಕೇಷನ್‌ ಕೂಡ ರೂಪಿಸಿದೆ.ಈ ಅಪ್ಲಿಕೇಷನ್ ಮೂಲಕ 5 ಸಾವಿರಕ್ಕಿಂತಲೂ ಹೆಚ್ಚು ಮಂದಿ ಸಾಮಾಜಿಕ ಕಾರ್ಯಕರ್ತರು, ನರ್ಸ್‌ಗಳು , ವೈದ್ಯರು ರೋಗಿಗಳನ್ನು ತಲುಪುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+