ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ಸಿಕ್ತು ಅನುಮತಿ!

|
Google Oneindia Kannada News

ಹೈದರಾಬಾದ್, ಜೂನ್ 30: ಕೊರೊನಾವೈರಸ್ ವಿರುದ್ಧ ಲಸಿಕೆ, ಔಷಧ ಕಂಡು ಹಿಡಿಯಲು ವಿಶ್ವದೆಲ್ಲೆಡೆ ನಿರಂತರವಾಗಿ ಸಂಶೋಧನೆಗಳು ನಡೆದಿದೆ. ಈಗ ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಹೊಸ ಆಶಾಕಿರಣವಾಗಿ ಹೊರಹೊಮ್ಮಿದೆ.

ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ತಯಾರಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಕ್ಲಿನಿಕಲ್ ಟ್ರಯಲ್ ಗೆ ಬಳಸಬಹುದು ಎಂದು ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದೆ.

ಕೊರೊನಾ ಹೊಸ ಲಸಿಕೆ:ಇಂಗ್ಲೆಂಡ್‌ನಲ್ಲಿ ಮನುಷ್ಯರ ಮೇಲೆ ಪ್ರಯೋಗ ಆರಂಭಕೊರೊನಾ ಹೊಸ ಲಸಿಕೆ:ಇಂಗ್ಲೆಂಡ್‌ನಲ್ಲಿ ಮನುಷ್ಯರ ಮೇಲೆ ಪ್ರಯೋಗ ಆರಂಭ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಗೆ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್ಐಜಿ) ಸಹಕಾರ ನೀಡಿವೆ.

COVAXIN: Indias first COVID-19 vaccine developed by Bharat Biotech gets nod for human trials

ಸಂಸ್ಥೆ ಪೂರ್ವಭಾವಿ ಅಧ್ಯಯನಗಳಿಂದ ಕಂಡುಕೊಂಡ ಫಲಿತಾಂಶಗಳ ಆಧಾರದ ಮೇಲೆ ಮಾನವರ ಮೇಲೆ ಪ್ರಯೋಗಿಸಲು ಅನುಮತಿಯನ್ನು ಸಂಸ್ಥೆ ಕೋರಿತ್ತು. ನಿಯಮಾವಳಿಗೆ ಬದ್ಧವಾಗಿದ್ದರಿಂದ ಮೊದಲ ಹಾಗೂ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.

ಕೊರೊನಿಲ್ ಕಿಟ್ ಲೈಸನ್ಸ್ ಗೊಂದಲ: ಆಚಾರ್ಯ ಬಾಲಕೃಷ್ಣ ಸ್ಪಷ್ಟನೆಕೊರೊನಿಲ್ ಕಿಟ್ ಲೈಸನ್ಸ್ ಗೊಂದಲ: ಆಚಾರ್ಯ ಬಾಲಕೃಷ್ಣ ಸ್ಪಷ್ಟನೆ

ಹೈದರಾಬಾದ್ ನಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗೆ ಕೊವ್ಯಾಕ್ಸಿನ್ ಎಂದು ಹೆಸರಿಡಲಾಗಿದೆ. ಇದು ದೇಶದ ಮೊದಲ ಸ್ಥಳೀಯ ಲಸಿಕೆಯಾಗಿದ್ದು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ, ಜುಲೈ 2020ರಲ್ಲಿ ಮೊದಲ ಹಂತದ ಕ್ಲಿನಿಕಲ್ ಟ್ರಯಲ್ ಆರಂಭವಾಗಲಿದೆ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ತಿಳಿಸಿದ್ದಾರೆ.

ಜಿನೋಮ್ ವ್ಯಾಲಿಯ ಪ್ರಯೋಗಾಲಯದಿಂದ ಹೊರ ಬಂದಿರುವ ಕೊವ್ಯಾಕ್ಸಿನ್ ನ ಕ್ಲಿನಿಕಲ್ ಟ್ರಯಲ್ ಅವಧಿ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ. ಕನಿಷ್ಠ ಎರಡು ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾದ ಬಳಿಕ ಮಾರುಕಟ್ಟೆಯಲ್ಲಿ ಲಸಿಕೆ ಲಭ್ಯವಾಗಲ್ದೆ.

ಭಾರತದ ವಿಜ್ಞಾನಿ ಇ ಕೃಷ್ಣಾ ಸ್ಥಾಪಿಸಿದ ಭಾರತ್ ಬಯೋಟೆಕ್, ಹೈದರಾಬಾದಿನಲ್ಲಿ ಕೇಂದ್ರ ಕಚೆರಿ ಹೊಂದಿದೆ. ಈ ಹಿಂದೆ ಹಂದಿಜ್ವರ, ಎಚ್ 1 ಎನ್ 1 ವಿರುದ್ಧ HNVAC ಎಂಬ ವ್ಯಾಕ್ಸಿನ್ ಹೊರ ತಂದಿತ್ತು.

English summary
COVAXIN, India's first vaccine against the novel coronavirus, developed by Bharat Biotech, Hyderbad-based biotechnology firm gets nod from the Drug Controller General of India (DCGI) to conduct Phase I and 2 human trials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X