ಹೈದರಾಬಾದ್‌ನಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು
ಹೈದರಾಬಾದ್, ಮಾರ್ಚ್ 4: ಭಾರತದಲ್ಲಿ ಕೊರೊನಾ ಸೋಂಕು (ಕೋವಿಡ್) ಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಹೈದರಾಬಾದ್‌ನಲ್ಲಿ ಮತ್ತೆರಡು ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಮಾಹಿತಿಯನ್ನು ಅಲ್ಲಿನ ಆರೋಗ್ಯ ಇಲಾಖೆ ಖಚಿತಪಡಿಸಿದೆ. ಈಗಾಗಲೇ ಟೆಕ್ಕಿಯೊಬ್ಬರಿಗೆ ಕೊರೊನಾ ಇರುವುದು ಪತ್ತೆಯಾಗಿದ್ದು, ಒಟ್ಟು ತೆಲಂಗಾಣದಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ.
ದಕ್ಷಿಣ ಕೊರಿಯಾ ಹಾಗೂ ಚೀನಾ ಪ್ರವಾಸ ಮಾಡಿ ಬಂದಿದ್ದ ಇಬ್ಬರನ್ನು ಕೊರೊನಾ ಶಂಕೆಯ ಮೇಲೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ನಡೆಸಲಾಗಿತ್ತು. ಪುಣೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ತಗುಲಿರುವುದು ಗೊತ್ತಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಅವರನ್ನು ಗಾಂಧಿ ಆಸ್ಪತ್ರೆಗೆ ಸೇರಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅಲ್ಲದೇ ೩೦೦೦ ಹಾಸಿಗೆಗಳ ವ್ಯವಸ್ಥೆಯನ್ನು ಮಾಡಲಾಗಿದ್ದು, ವ್ಯಾಪಕ ಜನಜಾಗೃತಿ ಹಾಕಿಕೊಂಡು, ವಿದೇಶದಿಂದ ಬರುವರ ಮೇಲೆ ಕಣ್ಣಿಡಲಾಗಿದೆ ಎಂದು ವರದಿಗಳು ತಿಳಿಸಿವೆ.












Click it and Unblock the Notifications