ಹೈದರಾಬಾದ್: 1.35 ಕೋಟಿ ರು ಹಳೆ ನೋಟು ವಶ, ಮೂವರ ಬಂಧನ

Posted By:
Subscribe to Oneindia Kannada

ಹೈದರಾಬಾದ್, ಮಾರ್ಚ್ 20 : ಹಳೆ ನೋಟಿಗೆ ಹೊಸ ನೋಟು ಬದಲಾವಣೆ ಮಾಡುವ ದಂಧೆಯಲ್ಲಿ ತೊಡಗಿದ್ದ ಮೂರು ಜನರನ್ನು ಸೋಮವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 1.35 ಕೋಟಿ ರು. ಮೌಲ್ಯದ ಹಳೆ ಐನೂರು ಮತ್ತು ಸಾವಿರ ಮುಖ ಬೆಲೆಯ ನೋಟುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.[ಹೈದರಾಬಾದ್: ಹಳೆ ನೋಟಿಗೆ ಹೊಸ ನೋಟು, 16 ಜನ ಅರೆಸ್ಟ್]

Currency exchange 3 persons arrested in hyderabad

ಹಳೆ ನೋಟುಗಳನ್ನು ಹೊಸ ನೋಟುಗಳನ್ನಾಗಿ ಪರಿವರ್ತಿಸಲು ಹಣ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿಯಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಶಕ್ಕೆ ಪಡೆಯಲಾದ ಹಳೆ ನೋಟುಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Three persons arrested in Hyderabad with demonetised currency notes of Rs 500 and Rs 1000 amounting to Rs 1.5 crore, On March 20.
Please Wait while comments are loading...