ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಡ್‌ ಅಲರ್ಟ್: ಆಂಧ್ರಕ್ಕೆ ಅಪ್ಪಳಿಸಲಿದೆ ಸೈಕ್ಲೋನ್ 'ಪೆಥಾಯ್'

|
Google Oneindia Kannada News

ಆಂಧ್ರಪ್ರದೇಶ, ಡಿಸೆಂಬರ್ 17: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ 6 ಗಂಟೆಗಳಲ್ಲಿ ಆಂಧ್ರಪ್ರದೇಶಕ್ಕೆ ಭಾರಿ ಚಂಡಮಾರುತ ಪೆಥಾಯ್ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಉತ್ತರ ಭಾಗದಿಂದ ವಾಯುವ್ಯ ಭಾಗಕ್ಕೆ ಬಿರುಗಾಳಿ ಬೀಸುತ್ತಿದೆ.ಆಂಧ್ರಪ್ರದೇಶದ ಕರಾವಳಿಯಲ್ಲಿರುವ ಕಾಕಿನಾಡಕ್ಕೆ ಸೋಮವಾರ ಮಧ್ಯಾಹ್ನದ ವೇಳೆಗೆ ತಲುಪಲಿದೆ. ಭಾರಿ ಮಳೆಯಾಗುವ ನಿರೀಕ್ಷೆಯೂ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಆಂಧ್ರಕ್ಕೆ ಚಂಡಮಾರುತ ಹೊಡೆತ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಆಂಧ್ರಕ್ಕೆ ಚಂಡಮಾರುತ ಹೊಡೆತ

ಆಂಧ್ರದ ಕರಾವಳಿ ಜಿಲ್ಲೆಗಳಲ್ಲೂ ಮುಖ್ಯವಾಗಿ ಕೃಷ್ಣ ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದ್ದು, ವಿಪರೀತ ಗಾಳಿ ಬೀಸುತ್ತಿದೆ. ಸಮುದ್ರದ ಮಟ್ಟವೂ ಹೆಚ್ಚಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ದಳ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗೆ ರಕ್ಷಣಾ ಕಾರ್ಯಾಚರಣೆಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.

Depression in bay of bengal cyclone forming moving towards andhra

ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ ವಾಯುಭಾರ ಕುಸಿತ: ಬೆಂಗಳೂರಲ್ಲಿ ನಾಳೆಯಿಂದ ಮೂರು ದಿನ 'ಗಜ'ಮಳೆ

ಚಂಡಮಾರುತದಿಂದ ಆಂಧ್ರಪ್ರದೇಶದ ಕರಾವಳಿ ಭಾಗ ಹಾಗೂ ತಮಿಳುನಾಡಿನ ಉತ್ತರ ಭಾಗ ಹಾಗೂ ಕರ್ನಾಟಕದ ಉತ್ತರ ಭಾಗದಲ್ಲಿ ಮಳೆ ಆಗುತ್ತದೆ ಎಂದು ಹೇಳಲಾಗಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಕರಾವಳಿಯತ್ತ ರಭಸವಾಗಿ ದಾವಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

English summary
The MeT department on Sunday warned that the cyclonic storm Phethai is likely to intensify into a severe category and cross Andhra Pradesh coast on Monday afternoon. The India Meteorological Department also issued an orange message as a warning of the storm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X