ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾಸಿನ್ ಭಟ್ಕಳ ಹಾಗೂ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ

ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೇರಿದಂತೆ ನಾಲ್ವರಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

By Mahesh
|
Google Oneindia Kannada News

ಹೈದರಾಬಾದ್, ಡಿಸೆಂಬರ್ 19: ಇಲ್ಲಿನ ಹೈದರಾಬಾದಿನ ದಿಲ್ ಸುಖ್ ನಗರ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೇರಿದಂತೆ ಐವರಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

2013ರ ಫೆಬ್ರವರಿಯಲ್ಲಿ ಹೈದರಾಬಾದಿನ ದಿಲ್ ಸುಖ್ ನಗರದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಯಾಸೀನ್ ಭಟ್ಕಳ ಮತ್ತು ಇತರೆ 4 ಮಂದಿ ಉಗ್ರರು ತಪ್ಪಿತಸ್ಥರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ನ್ಯಾಯಾಲಯ ಮಂಗಳವಾರ(ಡಿಸೆಂಬರ್ 13) ತೀರ್ಪು ನೀಡಿತ್ತು. [ಯಾಸಿನ್ ಭಟ್ಕಳ್ ಯಾರು?]

Dilsukhnagar blasts- Yasin Bhatkal, 4 others get death sentence

ಎಲ್ಲಾ ತಪ್ಪಿತಸ್ಥರ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಡಿಸೆಂಬರ್ 19ರಂದು ಪ್ರಕಟಿಸಿದೆ. ಎಲ್ಲ ಆರೋಪಿಗಳು ಸದ್ಯಕ್ಕೆ ಚೆರ್ಲಪಲ್ಲಿ ಜೈಲಿನಲ್ಲಿದ್ದಾರೆ.[ಬಿರಿಯಾನಿಗೆ ಹೆಸರಾಗಿದ್ದ ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]

ಇಂಡಿಯನ್ ಮುಜಾಹಿದೀನ್ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರಹಮಾನ್ ಅಲಿಯಾಸ್ ವಕಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಹಡ್ಡಿ, ತಹಸೀನ್ ಅಖ್ತರ್ ಅಲಿಯಾಸ್ ಮೋನು ಮತ್ತು ಐಜಾಜ್ ಷೇಖ್ ಅವರ ವಿರುದ್ಧ ನ್ಯಾಯಾಲಯ ಎನ್ ಐಎ ದೋಷಾರೋಪ ಪಟ್ಟಿ ಸಲ್ಲಿಸಿತ್ತು.[ನ್ಯೂಕ್ಲಿಯಾರ್ ಬಾಂಬಿಡಲು ಕಾರ್ಯಗತನಾಗಿದ್ದೆ- ಯಾಸಿನ್]

ಈ ಪ್ರಕರಣದ ಮುಖ್ಯ ಆರೋಪಿ ಇಂಡಿಯನ್ ಮುಜಾಹಿದೀನ್ ಸಂಸ್ಥಾಪಕ ರಿಯಾಜ್ ಭಟ್ಕಳ ಇನ್ನೂ ಪತ್ತೆಯಾಗಿಲ್ಲ. 2013ರ ಫೆಬ್ರವರಿ 21ರಂದು ಸಂಭವಿಸಿದ್ದ ಹೈದರಾಬಾದ್ ಸ್ಪೋಟದಲ್ಲಿ 17 ಮಂದಿ ಮೃತಪಟ್ಟಿದ್ದರು ಹಾಗೂ 119 ಮಂದಿ ತೀವ್ರವಾಗಿ ಗಾಯಗೊಂಡಿದ್ದರು.[ನಮ್ಮ ಮೊದಲ ಟಾರ್ಗೆಟ್ ನರೇಂದ್ರ ಮೋದಿ: ಐಎಂ]

ಯಾಸಿನ್ ಭಟ್ಕಳ,ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮುಗ್ದಮ್ ಕಾಲೋನಿಯ ನಿವಾಸಿಯಾಗಿದ್ದಾನೆ. ರಿಯಾಜ್ ಭಟ್ಕಳ ಸೆರೆಸಿಕ್ಕ ನಂತರ ಆತನಿಗೂ ಗಲ್ಲುಶಿಕ್ಷೆ ಅನ್ವಯವಾಗಲಿದೆ ಎಂದು ತಿಳಿದು ಬಂದಿದೆ.

English summary
A special court of the National Investigation Agency today sentenced Indian Mujahideen leader, Yasin Bhatkal and four others to death in connection with the Hyderabad Dilsukhnagar blasts case. The court held that the case falls under the category of the rarest of rare cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X