ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.ಕೆ.ಶಿವಕುಮಾರ್ ಈಗ ತೆಲಂಗಾಣ ಕಾಂಗ್ರೆಸ್ ಟ್ರಬಲ್ ಶೂಟರ್!

|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಈಗ ತೆಲಂಗಾಣದ ಕಾಂಗ್ರೆಸ್ ಟ್ರಬಲ್ ಶೂಟರ್ | Oneindia Kannada

ಹೈದರಾಬಾದ್, ನವೆಂಬರ್ 23 : ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ತೆಲಂಗಾಣ ಕಾಂಗ್ರೆಸ್ ಟ್ರಬಲ್ ಶೂಟರ್ ಆಗಿ ನೇಮಕ ಮಾಡಲಾಗಿದೆ. ಪಕ್ಷದ ಹೈಕಮಾಂಡ್ ಸಚಿವರಿಗೆ ಹೊಸ ಜವಾಬ್ದಾರಿಯನ್ನು ನೀಡಿದ್ದಾರೆ.

ಡಿಸೆಂಬರ್ 7ರಂದು ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ, ಅಸಮಾಧಾನವೂ ಉಂಟಾಗಿದೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!

ಕರ್ನಾಟಕದ ಇಬ್ಬರು ನಾಯಕರಿಗೆ ತೆಲಂಗಾಣ ಚುನಾವಣೆ ಉಸ್ತುವಾರಿ ನೀಡಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಲಂಗಾಣದಲ್ಲಿ ಚುನಾವಣೆಗೆ ಪ್ರಚಾರ ನಡೆಸಲಿದ್ದಾರೆ. ಇದು ಹೈಕಮಾಂಡ್ ನೀಡಿರುವ ಟಾಸ್ಕ್ ಆಗಿದೆ.

ತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆತೆಲಂಗಾಣ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಡಿ.ಕೆ.ಶಿವಕುಮಾರ್ ಸಂಘಟನಾ ಚತುರರು ಎಂಬುದು ಹಲವು ಸಂದರ್ಭದಲ್ಲಿ ಸಾಬೀತಾಗಿದೆ. ಆದ್ದರಿಂದ, ತೆಲಂಗಾಣ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಅಸಮಾಧಾನವನ್ನು ಶಮನಗೊಳಿಸುವ ಹೊಣೆಯನ್ನು ಅವರಿಗೆ ನೀಡಲಾಗಿದೆ. ಈಗಾಗಲೇ ಎರಡು ಬಾರಿ ಡಿ.ಕೆ.ಶಿವಕುಮಾರ್ ತೆಲಂಗಾಣಕ್ಕೆ ಭೇಟಿ ನೀಡಿದ್ದಾರೆ...

ತೆಲಂಗಾಣ ಚುನಾವಣೆ: ಕೈ ಪಟ್ಟಿಯಲ್ಲಿ 10 ಮಂದಿ ಸಿಎಂ ಆಕಾಂಕ್ಷಿಗಳುತೆಲಂಗಾಣ ಚುನಾವಣೆ: ಕೈ ಪಟ್ಟಿಯಲ್ಲಿ 10 ಮಂದಿ ಸಿಎಂ ಆಕಾಂಕ್ಷಿಗಳು

ಅಸಮಾಧಾನ ತಡೆಯಲು ಸಮಿತಿ

ಅಸಮಾಧಾನ ತಡೆಯಲು ಸಮಿತಿ

ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಟಿಕೆಟ್ ಸಿಗದವರು ಅಸಮಾಧಾನಗೊಳ್ಳುವ ಸಾಧ್ಯತೆ ಇದೆ. ಆದ್ದರಿಂದ, ಹೈಕಮಾಂಡ್ ಮೂವರು ನಾಯಕರ ಸಮಿತಿಯನ್ನು ರಚನೆ ಮಾಡಿದ್ದು, ಬಂಡಾಯ ಶಮನಗೊಳಿಸಲು ಸೂಚಿಸಲಾಗಿದೆ. ಈ ಸಮಿತಿಯಲ್ಲಿ ಕರ್ನಾಟಕ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸ್ಥಾನ ನೀಡಲಾಗಿದೆ.

ಸಮಿತಿಯಲ್ಲಿ ಯಾರಿದ್ದಾರೆ?

ಸಮಿತಿಯಲ್ಲಿ ಯಾರಿದ್ದಾರೆ?

ಹೈಕಮಾಂಡ್ ರಚನೆ ಮಾಡಿರುವ ಸಮಿತಿಗೆ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರು ಮುಖ್ಯಸ್ಥರು. ಡಿ.ಕೆ.ಶಿವಕುಮಾರ್ ಮತ್ತು ಪುದುಚೇರಿಯ ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣರಾವ್ ಅವರು ಸಮಿತಿಯಲ್ಲಿದ್ದಾರೆ.

ಡಿ.ಕೆ.ಶಿವಕುಮಾರ್ ಏಕೆ?

ಡಿ.ಕೆ.ಶಿವಕುಮಾರ್ ಏಕೆ?

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರು ಕಾರಣ. ಎರಡೂ ಪಕ್ಷದ ಶಾಸಕರನ್ನು ಒಗ್ಗೂಡಿಸಿ, ಯಾವುದೇ ಅಸಮಾಧಾನ ಆಗದಂತೆ ಎಚ್ಚರಿಕೆ ವಹಿಸಿದ್ದರು. ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿಯೂ ಸಹ ಅವರು ವಿ.ಎಸ್.ಉಗ್ರಪ್ಪ ಅವರನ್ನು ಗೆಲ್ಲಿಸಲು ಪ್ರಮುಖ ಪಾತ್ರ ವಹಿಸಿದ್ದರು. ಆದ್ದರಿಂದ, ಅವರನ್ನು ಸಮಿತಿಗೆ ಸೇರಿಸಲಾಗಿದೆ.

ನಾಯಕರ ಜೊತೆ ಸಂಧಾನ ಯಶಸ್ವಿ

ನಾಯಕರ ಜೊತೆ ಸಂಧಾನ ಯಶಸ್ವಿ

ಡಿ.ಕೆ.ಶಿವಕುಮಾರ್ ಅವರು ತೆಲಂಗಾಣಕ್ಕೆ ಈಗಾಗಲೇ ಭೇಟಿ ಕೊಟ್ಟು ಬಂಡಾಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಮಾತಿಗೆ ಬೆಲೆಕೊಟ್ಟು ನಾಯಕರು ಈಗಾಗಲೇ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಚುನಾವಣೆ ಮುಗಿಯುವ ತನಕ ಡಿ.ಕೆ.ಶಿವಕುಮಾರ್ ನಿರಂತರವಾಗಿ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.

English summary
Karnataka water resources minister D.K. Shivakumar has been sent to Telangana by the Central leadership to contain dissident activities among party leaders who have been denied ticket to contest assembly elections on December 7, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X