ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕೇಂದ್ರ ಪುರಾವೆ ತೋರಿಸಲಿ: ಕೆಸಿಆರ್
ಹೈದರಾಬಾದ್, ಫೆಬ್ರವರಿ 14: ''ಇಲ್ಲಿಯವರೆಗೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕೇಂದ್ರ ಸರ್ಕಾರದ ಬಳಿ ಪುರಾವೆ ಕೇಳುತ್ತಲೇ ಇದ್ದೇನೆ'' ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ. 2019ರ ಸೆಪ್ಟೆಂಬರ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ ಎಂಬ ಭಾರತೀಯ ಸೇನೆಯ ಪ್ರತಿಪಾದನೆಗೆ ಕೇಂದ್ರ ಸರ್ಕಾರದ ಬಳಿ ಸಾಕ್ಷಿ ಏನಿದೆ ಎಂದು ಪ್ರಶ್ನಿಸಿದ್ದಾರೆ.
''ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ ಹೀಗಾಗಿ ಜನರು ಸಾಕ್ಷಿ ಕೇಳುತ್ತಿದ್ದಾರೆ, ಕೇಂದ್ರ ಸರ್ಕಾರ ಪುರಾವೆ ತೋರಿಸಲಿ'' ಎಂದು ಸವಾಲು ಹಾಕಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಈ ಪ್ರಶ್ನೆ ಕೇಳಿದ್ದಾರೆ.
ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಭಾರತೀಯ ಸೇನೆ ಯೋಧರು ಗಡಿಯಲ್ಲಿ ಹೋರಾಡುತ್ತಿದ್ದಾರೆ. ಶತ್ರುಗಳಿಂದ ಯುದ್ಧದಲ್ಲಿ ಹೋರಾಡಿ ವೀರಮರಣವನ್ನು ಕಂಡರೆ ಅದರ ಕೀರ್ತಿ ಭಾರತೀಯ ಸೇನೆಗೆ ಹೋಗಬೇಕೆ ಹೊರತು ಕೇಂದ್ರದ ಬಿಜೆಪಿ ಸರ್ಕಾರಕ್ಕಲ್ಲ ಎಂದಿದ್ದಾರೆ.

ಕಳೆದ ಶುಕ್ರವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, ಜನರ ಮನೋಸ್ಥಿತಿ ನೋಡಿ, ಜನರಲ್ ಬಿಪಿನ್ ರಾವತ್ ಅವರು ನಮ್ಮ ದೇಶದ ಹೆಮ್ಮೆ. ಅವರ ನಾಯಕತ್ವದಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ಆಯಿತು. ಅದಕ್ಕೆ ರಾಹುಲ್ ಗಾಂಧಿ ಸಾಕ್ಷಿ ಕೇಳುತ್ತಿದ್ದಾರೆ.
ನೀವು ರಾಜೀವ್ ಗಾಂಧಿಯವರ ಮಗ ಹೌದೋ, ಅಲ್ಲವೋ ಎಂದು ನಾವು ಯಾವತ್ತಾದರೂ ನಿಮ್ಮಲ್ಲಿ ಸಾಕ್ಷಿ ಕೇಳಿದ್ದೇವೆಯೇ, ನಮ್ಮ ಸೇನೆಯಿಂದ ಸಾಕ್ಷಿ ಕೇಳಲು ನಿಮಗೆ ಯಾವ ಅಧಿಕಾರವಿದೆ ಎಂದು ಕೇಳಿದ್ದರು.
ಅಸ್ಸಾಂ ಮುಖ್ಯಮಂತ್ರಿಯವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್, ರಾಹುಲ್ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿಯನ್ನು ಹುದ್ದೆಯಿಂದ ವಜಾಗೊಳಿಸಿ ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡ ಅವರನ್ನು ಒತ್ತಾಯಿಸಿದ್ದಾರೆ.
ಇನ್ನು ಚಂದ್ರಶೇಖರ್ ರಾವ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ, ಇದು ಚಂದ್ರಶೇಖರ್ ರಾವ್ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆಯೇ, ಇಲ್ಲವೇ ಎಂದು ಪ್ರಶ್ನೆ ಮಾಡುವುದು ದೊಡ್ಡ ಅಪರಾಧ.
ಚಂದ್ರಶೇಖರ್ ರಾವ್ ಅವರು ನಾನು ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿರುವುದು ಅವರಿಗೆ ಸಿಟ್ಟು ತರಿಸಿರಬೇಕೆ ಹೊರತು ರಾಹುಲ್ ಗಾಂಧಿಯವರು ಭಾರತೀಯ ಸೇನೆಯ ಬಗ್ಗೆ ಮಾತನಾಡಿರುವುದು ಅವರಿಗೆ ಸಿಟ್ಟು ತರಿಸಿಲ್ಲ ಎನಿಸುತ್ತದೆ ಎಂದಿದ್ದಾರೆ.
ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸೆಪ್ಟೆಂಬರ್ 29, 2016ರಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಜಮ್ಮು-ಕಾಶ್ಮೀರದ ಉರಿಯ ಮೂಲ ಶಿಬಿರದಲ್ಲಿ 19 ಮಂದಿ ಭಾರತೀಯ ಯೋಧರು ಪಾಕ್ ಬೆಂಬಲಿತ ಉಗ್ರರಿಂದ ಹುತಾತ್ಮರಾಗಿದ್ದಕ್ಕೆ ಪ್ರತೀಕಾರವಾಗಿ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications