ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಬಿಜೆಪಿ ಮುಖಂಡ ಬಂಗಾರು ಲಕ್ಷ್ಮಣ್ ಇನ್ನಿಲ್ಲ

|
Google Oneindia Kannada News

Bangaru Laxman
ಹೈದರಾಬಾದ್, ಮಾ.1 : ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಪಕ್ಷದ ಹಿರಿಯ ಮುಖಂಡ ಬಂಗಾರು ಲಕ್ಷ್ಮಣ್ ಅವರು ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಒಂದು ವಾರದಿಂದ ಯಶೋದಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲತಃ ಆಂಧ್ರಪ್ರದೇಶದವರಾದ ಬಂಗಾರು ಲಕ್ಷ್ಮಣ್ (74) ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದು ಒಂದು ವಾರದ ಹಿಂದೆ ಅವರನ್ನು ಸಿಕಿಂದರಾಬಾದ್‌ನಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶನಿವಾರ ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಂಗಾರು ಲಕ್ಷ್ಮಣ್ ಅವರು 2000ದಿಂದ 2001ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. 1999 ಮತ್ತು 2000ದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಭಾನುವಾರ ಆಂಧ್ರಪ್ರದೇಶದಲ್ಲಿ ಬಂಗಾರು ಲಕ್ಷ್ಮಣ್ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದ್ದು, ಬಿಜೆಪಿ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

1939 ಮಾರ್ಚ್ 17ರಂದು ಆಂಧ್ರ ಪ್ರದೇಶದಲ್ಲಿ ಜನಿಸಿದ್ದ ಬಂಗಾರು ಲಕ್ಷ್ಮಣ್, ಚಿಕ್ಕ ವಯಸ್ಸಿನಲ್ಲಿಯೇ ರಾಜಕೀಯ ಪ್ರವೇಶಿಸಿದ್ದರು. ದಿ.ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಆಂತರಿಕ ತುರ್ತು ಪರಿಸ್ಥಿತಿ ಹೇರಿದಾಗ ಅದನ್ನು ವಿರೋಧಿಸಿ ಸೆರೆವಾಸ ಸಹ ಅನುಭವಿಸಿದ್ದರು. ಮೃತ ಬಂಗಾರು ಲಕ್ಷ್ಮಣ್ ಅವರು ಪತ್ನಿ ಸುಶೀಲಾ, ಓರ್ವ ಪುತ್ರ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. [ಲಂಚ ಪಡೆಯುವಾಗ ಸಿಕ್ಕಿಬಿದ್ದ ಲಕ್ಷ್ಮಣ್]

ತೆಹಲ್ಕಾ ಕಾರ್ಯಚರಣೆ : ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ ಆಡಳಿದಲ್ಲಿದ್ದ ಸಂದರ್ಭದಲ್ಲಿ ಸಚಿವರಾಗಿದ್ದ ಬಂಗಾರು ಲಕ್ಷ್ಮಣ್ ಲಂಚ ಸ್ವೀಕರಿಸುತ್ತಿದ್ದ ವೇಳೆ ತೆಹಲ್ಕಾ ಪತ್ರಿಕೆ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 4 ವರ್ಷಗಳ ಕಾಲ ಸೆರೆವಾಸವನ್ನು ಅನುಭವಿಸಿದ್ದರು.

English summary
Former BJP president and former Union minister Bangaru Laxman (74)died in Hyderabad on Saturday, March 1. Laxman, who had been unwell for a long time, passed away in a Hyderabad's Yashoda Hospital. Bangaru Laxman was president of the BJP between 2000 and 2001.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X