ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

just in: ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಜಾಮೀನು

|
Google Oneindia Kannada News

ಹೈದರಾಬಾದ್, ಜುಲೈ 27: ಒಂದು ತಿಂಗಳ ಹಿಂದೆ ತೆಲಂಗಾಣದಲ್ಲಿ ಆಕ್ರೋಶ ಮತ್ತು ರಾಜಕೀಯ ಘರ್ಷಣೆಗೆ ಕಾರಣವಾಗಿದ್ದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಅಪ್ರಾಪ್ತ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶಾಸಕರ ಪುತ್ರ ಸೇರಿದಂತೆ ನಾಲ್ವರು ಆರೋಪಿಗಳನ್ನು ಜೂನ್ ಮೊದಲ ವಾರದಿಂದ ಬಾಲಾಪರಾಧಿಗೃಹದಲ್ಲಿ ಬಂಧಿಸಲಾಗಿದೆ. ಈಗ ನಾಲ್ವರು ಅಪ್ರಾಪ್ತರನ್ನು ಜಾಮೀನಿನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರಿಗೂ ಬಾಲ ನ್ಯಾಯ ಮಂಡಳಿಯಿಂದ ಜಾಮೀನು ಮಂಜೂರಾಗಿದೆ.

ಭಾರತದಲ್ಲಿ ಮದ್ಯಪಾನ ಬಿಟ್ಟರೆ ಅತ್ಯಾಚಾರ, ಕೊಲೆ, ಸುಲಿಗೆ ಕಡಿಮೆ ಆಗುತ್ತಾ!?ಭಾರತದಲ್ಲಿ ಮದ್ಯಪಾನ ಬಿಟ್ಟರೆ ಅತ್ಯಾಚಾರ, ಕೊಲೆ, ಸುಲಿಗೆ ಕಡಿಮೆ ಆಗುತ್ತಾ!?

ಈ ಪ್ರಕರಣದಲ್ಲಿ ಬಂಧಿತರಾಗಿರುವ ಐದನೇ ಅಪ್ರಾಪ್ತ ಬಾಲಕ ಜಾಮೀನಿಗಾಗಿ ತೆಲಂಗಾಣ ಹೈಕೋರ್ಟ್‌ಗೆ ಮೊರೆ ಹೋಗಿರುವುದರಿಂದ ಇನ್ನು ಬಾಲಾಪರಾಧಿ ಗೃಹದಲ್ಲಿಯೇ ಇರುತ್ತಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಏಕೈಕ ವಯಸ್ಕ ಆರೋಪಿ ಸದುದ್ದೀನ್ ಮಲ್ಲಿಕ್ ಜೈಲಿನಲ್ಲಿದ್ದಾನೆ.

Hyderabad Gang-Rape Case: All Four Accused Minors Get Bail

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಕಾರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ. ಅಪ್ರಾಪ್ತ ಆರೋಪಿಗಳು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು "ರಾಜಕೀಯವಾಗಿ ಪ್ರಭಾವಿ" ಕುಟುಂಬಗಳಿಗೆ ಸೇರಿದವರಾಗದ್ದಾರೆ.

ಜನಪ್ರಿಯ ಪಬ್‌ನಲ್ಲಿ ಪಾರ್ಟಿ ಮುಗಿಸಿ ಐವರು ಯುವಕರೊಂದಿಗೆ ಕಾರಿನಲ್ಲಿ ಬಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಆರಂಭದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದಾರೆ. ನಂತರ ಅದು ಅತ್ಯಾಚಾರ ಪ್ರಕರಣವಾಗಿ ಬದಲಾಯಿತು.

ಈ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ಸರ್ಕಾರ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಆರೋಪಿಸಿದ್ದವು.

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಕೂಡ ರಾಜ್ಯದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪೊಲೀಸರಿಂದ ವಿವರವಾದ ವರದಿಯನ್ನು ಕೇಳಿದೆ.

English summary
Hyderabad Gangrape: All four accused Minors, including the son of a MLA gets Bail, have been released from a juvenile home.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X