ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಹೈದರಾಬಾದ್ ಅತ್ಯಾಚಾರ ಪ್ರಕರಣ; 4ನೇ ಆರೋಪಿ ಬಂಧನ

|
Google Oneindia Kannada News

ಹೈದರಾಬಾದ್, ಜೂನ್ 05; ಹೈದರಾಬಾದ್‌ನಲ್ಲಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿ ಬಂಧಿಸಲಾಗಿದೆ. ಈ ಆರೋಪಿ ಸಹ ಅಪ್ರಾಪ್ತನಾಗಿದ್ದು, 5ನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಕಳೆದ ಶನಿವಾರ 17 ವರ್ಷದ ಯುವತಿ ಮೇಲೆ ಕಾರಿನಲ್ಲಿ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಪ್ರಕರಣದಲ್ಲಿ ಮೂವರು ಆರೋಪಿಗಳು ಅಪ್ರಾಪ್ತರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಹೈದರಾಬಾದ್‌ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಹೈದರಾಬಾದ್‌ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ

ಇದುವರೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ನಾಲ್ಕನೇ ಆರೋಪಿಯನ್ನು ಭಾನುವಾರ ವಶಕ್ಕೆ ಪಡೆಯಲಾಗಿದೆ. ಇನ್ನೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

Breaking; ಹೈದರಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ, ಒಬ್ಬ ಆರೋಪಿ ಬಂಧನ Breaking; ಹೈದರಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ, ಒಬ್ಬ ಆರೋಪಿ ಬಂಧನ

Gang Rape In Car At Hyderabad 4th Accused Arrested

ತೆಲಂಗಾಣ ರಾಜಕೀಯದಲ್ಲಿ ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳಲ್ಲಿ ಅಧಿಕಾರಿಗಳು, ಶಾಸಕರ ಪುತ್ರರು ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ರಾಜ್ಯ ಬಿಜೆಪಿ ಘಟಕ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಆಗ್ರಹ ಮಾಡುತ್ತಿದೆ.

ಆರೋಪಿ, ದೂರದಾರರು ರಾಜಿಯಾದರೆ ಅತ್ಯಾಚಾರ ಪ್ರಕರಣ ಖಲ್ಲಾಸ್… !ಆರೋಪಿ, ದೂರದಾರರು ರಾಜಿಯಾದರೆ ಅತ್ಯಾಚಾರ ಪ್ರಕರಣ ಖಲ್ಲಾಸ್… !

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತಾಗಿರುವ ಆರೋಪಿಗಳಲ್ಲಿ ಒಬ್ಬ ಟಿಆರ್‌ಎಸ್ ಮುಖಂಡರೊಬ್ಬರ ಪುತ್ರ. ಶುಕ್ರವಾರ ಒಬ್ಬ ಆರೋಪಿನ್ನು ಬಂಧಿಸಲಾಗಿತ್ತು. ಶನಿವಾರ ಮತ್ತಿಬ್ಬರನ್ನು ಬಂಧಿಸಲಾಗಿದೆ. ಭಾನುವಾರ 4ನೇ ಆರೋಪಿ ಬಂಧನವಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಂತ್ರಸ್ತ ಯುವತಿ ಒಬ್ಬ ಆರೋಪಿಯ ಹೆಸರನ್ನು ಮಾತ್ರ ಹೇಳಿದ್ದಳು. ಈ ಮಾಹಿತಿ ಮೇರೆಗೆ ಆರೋಪಿ ಬಂಧಿಸಿ ವಿಚಾರಣೆ ನಡೆಸಿದ ಬಳಿಕ ನಾಲ್ವರನ್ನು ಬಂಧಿಸಲಾಗಿದೆ. 5ನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಪಬ್‌ನಲ್ಲಿ ಯುವತಿ ಪರಿಚಯ ಮಾಡಿಕೊಂಡ ಆರೋಪಿಗಳು. ಆಕೆಯನ್ನು ಮನೆಗೆ ಡ್ರಾಪ್ ಮಾಡುವ ಭರವಸೆ ನೀಡಿ ಕಾರು ಹತ್ತಿಸಿಕೊಂಡಿದ್ದರು. ಬಳಿಕ ಕಾಪಿ ಶಾಪ್‌ಗೆ ಕರೆದುಕೊಂಡು ಬಂದಿದ್ದರು. ಅಲ್ಲಿಂದ ಹೊರಟು ನಿರ್ಜನ ಪ್ರದೇಶಕ್ಕೆ ಬಂದಾಗ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬುದು ಆರೋಪವಾಗಿದೆ.

English summary
17-year-old girl gang raped inside a car on Saturday, May 29th evening in Hyderabad. 4th accused arrested in connection with the case. One accused yet to be arrest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X