Breaking; ಹೈದರಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ, ಒಬ್ಬ ಆರೋಪಿ ಬಂಧನ
ಹೈದರಾಬಾದ್, ಜೂನ್ 03; ಹೈದರಾಬಾದ್‌ನಲ್ಲಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಮೂವರು ಆರೋಪಿಗಳು ಅಪ್ರಾಪ್ತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಶನಿವಾರ ಮಧ್ಯಾಹ್ನ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಸಂತ್ರಸ್ತ ಯುವತಿ ಒಬ್ಬ ಆರೋಪಿಯ ಹೆಸರನ್ನು ಮಾತ್ರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಹೇಳಿದ್ದಳು. ಈ ಮಾಹಿತಿ ಮೇರೆಗೆ ಆರೋಪಿ ಬಂಧಿಸಲಾಗಿದೆ.
ಇದೊಂದು ಹೈ ಪ್ರೊಫೈಲ್ ಪ್ರಕರಣವಾಗಿದೆ. ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳಲ್ಲಿ ಅಧಿಕಾರಿಗಳು, ಶಾಸಕರ ಪುತ್ರರು ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ಘಟಕ ಶುಕ್ರವಾರ ಹೈದರಾಬಾದ್‌ನಲ್ಲಿ ಪ್ರತಿಭಟನೆ ಸಹ ನಡೆಸಿದೆ.

ಈ ಪ್ರಕರಣದಲ್ಲಿನ ಆರೋಪಿಗಳಲ್ಲಿ ಎಐಎಂಐಎಂ ಶಾಸಕರ ಪುತ್ರ, ವಕ್ಫ್ ಅಧಿಕಾರಿ ಮತ್ತು ಟಿಆರ್‌ಎಸ್ ಮುಖಂಡರೊಬ್ಬರ ಪುತ್ರರು ಎಂಬ ಶಂಕೆ ಇದೆ. ಸಾಮೂಹಿಕ ಅತ್ಯಾಚಾರ ಪ್ರಕರಣದ 5 ಆರೋಪಿಗಳ ಪೈಕಿ ಮೂವರು ಅಪ್ರಾಪ್ತರು.
ಕಳೆದ ಶನಿವಾರ ಜುಬಲಿ ಹಿಲ್ಸ್‌ನ ರಸ್ತೆ ಸಂಖ್ಯೆ 36ರಲ್ಲಿನ ಪಬ್‌ಗೆ ಬಾಲಕಿ ಸ್ನೇಹಿತರೊಂದಿಗೆ ತೆರಳಿದ್ದರು. ಆಗ ಕೆಲವು ಹುಡುಗರು ಆಕೆಯನ್ನು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಪಬ್‌ನಿಂದ ಬಂಜಾರಾ ಹಿಲ್ಸ್‌ನ ಬೇಕರಿಯಲ್ಲಿ ಹಲವು ಸಮಯ ಕಳೆದಿದ್ದಾರೆ.
ಬಳಿಕ ಬೆಂಜ್ ಮತ್ತು ಇನ್ನೋವಾ ಕಾರಿನಲ್ಲಿ ಏಕಾಂತ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಹುಡುಗರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಪಬ್‌ಗೆ ತಂದು ಬಿಟ್ಟಿದ್ದಾರೆ ಎಂಬುದು ದೂರು. ಪಬ್‌ನಿಂದ ಬಳಿಕ ಬಾಲಕಿಯನ್ನು ಆಕೆಯ ತಂದೆ ಕರೆದುಕೊಂಡು ಹೋಗಿದ್ದಾರೆ.












Click it and Unblock the Notifications