ಜಿಇಎಸ್ 2017: ಮೋದಿ ಜತೆ ವೇದಿಕೆ ಹಂಚಿಕೊಳ್ಳಲಿರುವ ಟ್ರಂಪ್ ಪುತ್ರಿ
Recommended Video

ಹೈದರಾಬಾದ್, ನವೆಂಬರ್ 28: ಮುತ್ತಿನ ನಗರಿ ಹೈದರಾಬಾದಿನಲ್ಲಿ ಇಂದು ಜಾಗತಿಕ ಉದ್ಯಮಶೀಲತೆ ಶೃಂಗಸಭೆ (ಜಿಇಎಸ್) ಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಮತ್ತು ಸಲಹೆಗಾರ್ತಿ ಇವಾಂಕಾ ಟ್ರಂಪ್ ಮೂರು ದಿನ ಕಾರ್ಯಕ್ರರ್ಮದಲ್ಲಿ ತಮ್ಮ ದೇಶದ ನಿಯೋಗವನ್ನು ಪ್ರತಿನಿಧಿಸಲಿದ್ದಾರೆ.
ಗ್ಯಾಲರಿ : ಮುತ್ತಿನನಗರಿಯಲ್ಲಿ ಟ್ರಂಪ್ ಪುತ್ರಿ ಇವಾಂಕಾ
ಶೃಂಗಸಭೆಯ ಆತಿಥ್ಯ ವಹಿಸಿರುವ ಹೈದರಾಬಾದಿನಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿದೆ. 18 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಗಳು ಸುರಕ್ಷತೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ವಿವಿಧ ದೇಶಗಳ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಖ್ಯಾತನಾಮರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.

127ಕ್ಕೂ ಅಧಿಕ ದೇಶಗಳಿಂದ 1200 ಯುವ ಉದ್ಯಮಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಸುಗಮವಾಗಿ ನೆರವೇರಲು ಅಗತ್ಯವಾದ ಎಲ್ಲ ಕ್ರಮಗಳನ್ನು ತೆಲಂಗಾಣ ಸರ್ಕಾರ ಕೈಗೊಂಡಿದೆ.
ಇಂಧನ, ಮೂಲಸೌಕರ್ಯಾಭಿವೃದ್ದಿ, ಆರೋಗ್ಯ ಆರೈಕೆ, ಜೀವ ವಿಜ್ಞಾನ, ಆರ್ಥಿಕ ತಂತ್ರಜ್ಞಾನ, ಡಿಜಿಟಲ್ ಆರ್ಥಿಕತೆ ಹಾಗೂ ಮಾಧ್ಯಮ ಮತ್ತು ಮನರಂಜನೆ ವಲಯಗಳ ಮೇಲೆ ಕೇಂದ್ರೀಕೃತವಾಗಿರುವ ಈ ಸಮಾವೇಶದಲ್ಲಿ ಹಲವು ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ.

ಇವಾಂಕಾ ಟ್ರಂಪ್ ಅವರಿಗೆ ಭರ್ಜರಿ ಆತಿಥ್ಯ ನೀಡಲು ಸರ್ಕಾರ ಸಿದ್ಧವಾಗಿದೆ. ಪ್ರಧಾನಿ ಮೋದಿ ಅವರು ಫಲಕ್ನಾಮ ಪ್ಯಾಲೇಸ್ ನಲ್ಲಿ ಅತಿದೊಡ್ಡ ಔತಣಕೂಟ ಏರ್ಪಡಿಸಿದ್ದಾರೆ. ಈ ನಡುವೆ ಮೋದಿ ಅವರು ಇಂದು ಮಧ್ಯಾಹ್ನ ಹೈದರಾಬಾದ್ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇವಾಂಕಾ ಅವರು ಪತಿ ಜತೆಗೆ ಚಾರ್ಮಿನಾರ್ ಗೆ ಭೇಟಿ ನೀಡಲಿದ್ದಾರೆ.












Click it and Unblock the Notifications