ಹೈದರಾಬಾದ್ : ಬಿಜೆಪಿ ಮುನ್ನಡೆ ಕಂಡು, ಬಿಎಲ್ ಸಂತೋಷ್ ಸಂತಸ
ಹೈದರಾಬಾದ್, ಡಿ. 4: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಸಲಾಗಿದ್ದು, ಬಿಜೆಪಿ ಜಯ ದಾಖಲಿಸುವ ಹೊಸ್ತಿಲಲ್ಲಿರುವುದನ್ನು ಕಂಡು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್ ಸಂತೋಷ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
"ಕೋಮುವಾಗಿ, ಹಣ ಬಲ, ಕುತಂತ್ರ ರಾಜಕೀಯದ ಎದುರು ತೆಲಂಗಾಣ ಬಿಜೆಪಿ ಸಮರ್ಥ ಹೋರಾಟ ನಡೆಸಿದೆ. ಬಂಡಿ ಸಂಜಯ್(ತೆಲಂಗಾಣ ಬಿಜೆಪಿ ಅಧ್ಯಕ್ಷ) ಹಾಗೂ ತಂಡದ ಶ್ರಮಕ್ಕೆ ನನ್ನ ಅಭಿನಂದನೆಗಳು'' ಎಂಬರ್ಥದಲ್ಲಿ ಸಂತೋಷ್ ಟ್ವೀಟ್ ಮಾಡಿದ್ದಾರೆ.
ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಭಾರಿಯನ್ನಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ನೇಮಿಸಲಾಗಿದೆ. ಕರ್ನಾಟಕದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರಿಗೆ ನಾಲ್ಕು ಅಸೆಂಬ್ಲಿಯ ಉಸ್ತುವಾರಿ ನೀಡಲಾಗಿತ್ತು.
WELDONE BHAGYANAGAR ......!!!! Great going team @BJP4Telangana You made a mark .
— B L Santhosh (@blsanthosh) December 4, 2020
ತೆಲಂಗಾಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿರುವ ಬಿಜೆಪಿ, ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿಯೂ ತನ್ನ ಶಕ್ತಿ ಪ್ರದರ್ಶನ ಮಾಡುವ ಮೂಲಕ ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಗುರಿ ಹೊಂದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಭರ್ಜರಿ ಪ್ರಚಾರ ನಡೆಸಿದ್ದರು.

2016ರಲ್ಲಿ ಟಿಆರ್ ಎಸ್ 99(43%), ಎಂಐಎಂ 44(15.85%), ಕಾಂಗ್ರೆಸ್ 1(10.40%), ಟಿಡಿಪಿ 2 (13.11%) ಹಾಗೂ ಬಿಜೆಪಿ 4 (10.34%) ಫಲಿತಾಂಶ ಬಂದಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಆಡಳಿತಾರೂಢ ಟಿಆರ್ ಎಸ್ ಅಲ್ಲದೆ, ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಕೂಡಾ ಪಾಲಿಕೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಲು ಸೆಣಸಾಟ ನಡೆಸಿದ್ದವು. ಡಿ.1ರಂದು ಶೇ 46ರಷ್ಟು ಮತದಾನ ದಾಖಲಾಗಿತ್ತು. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ.
We know what @BJP4Telangana is up against ..It’s facing a deadly mix of communal , money & manipulative politics . With this, Team @bandisanjay_bjp have put up a great fight .
— B L Santhosh (@blsanthosh) December 4, 2020
ಆಡಳಿತಾರೂಢ ಟಿಆರ್ ಎಸ್ ಅಲ್ಲದೆ, ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಕೂಡಾ ಪಾಲಿಕೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಲು ಸೆಣಸಾಟ ನಡೆಸಿವೆ. ಡಿ.1ರಂದು ಶೇ 46ರಷ್ಟು ಮತದಾನ ದಾಖಲಾಗಿತ್ತು. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ.












Click it and Unblock the Notifications