ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

GHMC:ಕ್ರಿಮಿನಲ್ ಕೇಸ್ ಅಭ್ಯರ್ಥಿಗಳು ಬಿಜೆಪಿಯಲ್ಲೇ ಅಧಿಕ

|
Google Oneindia Kannada News

ಹೈದರಾಬಾದ್, ನ. 26: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಕುರಿತಂತೆ ಸ್ಥಳೀಯ ಸಂಸ್ಥೆಯೊಂದು ಅಭ್ಯರ್ಥಿಗಳ ಅಫಿಡವಿಟ್ ಶೋಧಿಸಿ, ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವವರ ಪಟ್ಟಿ ನೀಡಿದೆ.

ಈ ವರದಿ ಪ್ರಕಾರ, 49 ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿದ್ದು, 96ಕ್ಕೂ ಅಧಿಕ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಈ ಪೈಕಿ 6 ಮಂದಿ ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಪಕ್ಷಗಳ ಪೈಕಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದಲ್ಲಿ ಅತ್ಯಧಿಕ ಅಭ್ಯರ್ಥಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ.

 ಡೆಲ್ಲಿಯ ಟೂರಿಸ್ಟ್‌ಗಳಿಂದ ದೂರ ಇರಿ: ಸಚಿವ ಕೆಟಿ ರಾಮರಾವ್ ಡೆಲ್ಲಿಯ ಟೂರಿಸ್ಟ್‌ಗಳಿಂದ ದೂರ ಇರಿ: ಸಚಿವ ಕೆಟಿ ರಾಮರಾವ್

ಬಿಜೆಪಿಯಲ್ಲಿ 17 ಮಂದಿ ಇದ್ದರೆ, ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯಲ್ಲಿ 13, ಕಾಂಗ್ರೆಸ್‌ನಲ್ಲಿ 12, ಎಐಎಂಐಎಂನಲ್ಲಿ 7 ಮಂದಿ ಕ್ರಿಮಿನಲ್ ದಾಖಲೆ ಹೊಂದಿದ್ದಾರೆ ಎಂದು ಪದ್ಮನಾಭ ರೆಡ್ಡಿ ನೇತೃತ್ವದ ಸರ್ಕಾರೇತರ ಸಂಸ್ಥೆ ವರದಿ ನೀಡಿದೆ.

GHMC Elections: 49 Candidates Have Criminal Record

ಸುಮಾರು 41 ವಾರ್ಡ್ ಗಳಲ್ಲಿ ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿಗಳು ಕಂಡು ಬಂದಿದ್ದು, ಈ ಪೈಕಿ ಮಲ್ಕಾಜ್ ಗಿರಿ ವಿಭಾಗದಲ್ಲಿ ಎಲ್ಲಾ ಪ್ರಮುಖ ಅಭ್ಯರ್ಥಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. 2016ರಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಸಂಖ್ಯೆ 72ರಷ್ಟಿತ್ತು. ಈ ಬಾರಿ 49ಕ್ಕೆ ಇಳಿದಿರುವುದು ಉತ್ತಮ ಬೆಳವಣಿಗೆ ಎನ್ನಬಹುದು ಎಂದು ಫೋರಂ ಫಾರ್ ಗುಡ್ ಗವರ್ನೆಂಸ್ ಸಂಸ್ಥೆಯ ಪದ್ಮನಾಭ ರೆಡ್ಡಿ ಹೇಳಿದ್ದಾರೆ.

150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಯಲಿದೆ. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.

ತಾಕತ್ತಿದ್ದರೆ ಮೊದಲು ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿಗೆ ಓವೈಸಿ ಸವಾಲುತಾಕತ್ತಿದ್ದರೆ ಮೊದಲು ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿಗೆ ಓವೈಸಿ ಸವಾಲು

Recommended Video

IND vs AUS 1st ODI Preview:Team India ಮಾರ್ಚ್ ತಿಂಗಳ ನಂತರ ಇದೇ ಮೊದಲು ನಾಳಿನ ಪಂದ್ಯದಲ್ಲಿ |Oneindia Kannada

ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ. 2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 74 ಲಕ್ಷ ಮತದಾರರಿದ್ದಾರೆ.

English summary
Over 49 have a criminal record with the total number of criminal cases at 96 in Greater Hyderabad Municipal Corporation (GHMC) polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X