• search
 • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

GHMC: ಬಿಜೆಪಿ ಪ್ರಣಾಳಿಕೆಯಲ್ಲಿ ಕೊರೊನಾ ಲಸಿಕೆ, ಚಿಕಿತ್ಸೆ

|

ಹೈದರಾಬಾದ್, ನ. 26: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಾಗಿ ಆಡಳಿತಾರೂಢ ತೆಲಂಗಾಣ ರಾಷ್ಟ್ರಸಮಿತಿ, ಕಾಂಗ್ರೆಸ್ ನಂತರ ಭಾರತೀಯ ಜನತಾ ಪಕ್ಷ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ.

150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಯಲಿದೆ. ಡಿಸೆಂಬರ್ 4ರಂದು ಮತ ಎಣಿಕೆ ನಡೆಯಲಿದೆ.

2022ರೊಳಗೆ ಕಸ ಮುಕ್ತ ಹೈದರಾಬಾದ್, ಕಾಂಗ್ರೆಸ್ ಭರವಸೆ2022ರೊಳಗೆ ಕಸ ಮುಕ್ತ ಹೈದರಾಬಾದ್, ಕಾಂಗ್ರೆಸ್ ಭರವಸೆ

ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ. 2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 74 ಲಕ್ಷ ಮತದಾರರಿದ್ದಾರೆ.

ಬಿಜೆಪಿ ಪ್ರಣಾಳಿಕೆ ಮುಖ್ಯಾಂಶಗಳು:
ಕೇಂದ್ರ ಸರ್ಕಾರದ ನಿರ್ದೇಶನದಂತೆ ಕೊರೊನಾ ಲಸಿಕೆ ಹಾಗೂ ಕೊರೊನಾ ಪರೀಕ್ಷೆ ಎಲ್ಲರಿಗೂ ಒದಗಿಸಲಾಗುವುದು.

GHMC:ಕ್ರಿಮಿನಲ್ ಕೇಸ್ ಅಭ್ಯರ್ಥಿಗಳು ಬಿಜೆಪಿಯಲ್ಲೇ ಅಧಿಕGHMC:ಕ್ರಿಮಿನಲ್ ಕೇಸ್ ಅಭ್ಯರ್ಥಿಗಳು ಬಿಜೆಪಿಯಲ್ಲೇ ಅಧಿಕ

* ಪ್ರಧಾನ ಮಂತ್ರಿ ಆವಾಸ್ ಯೋಜನಾ (PMAY) ಅಡಿಯಲ್ಲಿ ಬಡವರಿಗೆ 1 ಲಕ್ಷ ಮನೆಗಳನ್ನು ಗ್ರೇಟರ್ ಹೈದರಾಬಾದ್ ಭಾಗದಲ್ಲಿ ನಿರ್ಮಿಸಿ ಕೊಡಲಾಗುವುದು.

* ಮಹಿಳೆಯರಿಗೆ ಮೆಟ್ರೋ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣ.

* ಆನ್ ಲೈನ್ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ನೀಡಲಾಗುವುದು, ಸೂಕ್ತವಾದ ವೈಫೈ ಒದಗಿಸಲಾಗುವುದು.

* ಸ್ಲಂ ಹಾಗೂ ಎಸ್ ಸಿ ಕಾಲೋನಿಗಳಲ್ಲಿನ ಆಸ್ತಿ ತೆರಿಗೆ ರದ್ದುಗೊಳಿಸಲಾಗುವುದು.

   Hardik Pandya ಕೇವಲ ಬ್ಯಾಟ್‌ನಿಂದಲೇ ಪಂದ್ಯ ಗೆಲ್ಲಿಸ ಬಲ್ಲರು | Oneindia Kannada

   * ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.
   * ತೆರೆದ ಚರಂಡಿ ಹಾಗೂ ಕೊಳಚೆ ನೀರು ನಿರ್ವಹಣೆಗಾಗಿ 1000 ಕೋಟಿ ಮೀಸಲು. ಸುಮೇಧ ಕಾಯ್ದೆ ಯಡಿಯಲ್ಲಿ ಭೂಕಬಳಕೆಯನ್ನು ನಿರ್ಮೂಲನೆ ಮಾಡಲಾಗುವುದು.
   * ಗ್ರೇಟರ್ ಹೈದರಾಬಾದ್ ಪ್ರದೇಶದಲ್ಲಿ ಪ್ರವಾಹ ಪೀಡಿತರಿಗೆ 25,000 ರು ನೀಡಲಾಗುತ್ತದೆ.
   * ತಿಂಗಳಿಗೆ 100 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುತ್ತಿರುವವರಿಗೆ ಉಚಿತ ವಿದ್ಯುತ್ ಪೂರೈಕೆ.
   * 125 ಚದರಡಿಯಲ್ಲಿ ನಿರ್ಮಾಣವಾದ ಮನೆಗಳಿಗೆ ಶುಲ್ಕಗಳಿರುವುದಿಲ್ಲ.
   * ಎಲ್ಲಾ ಮನೆಗಳಿಗೂ ನಲ್ಲಿ ಅಳವಡಿಕೆ, ಉಚಿತ ಕುಡಿಯುವ ನೀರು ಪೂರೈಕೆ
   * ಮೂಸಿ ನದಿ ಪುನರುತ್ಥಾನ, ಅಭಿವೃದ್ಧಿಗೆ ಯೋಜನೆ.

   English summary
   GHMC elections: The BJP in tis manifesto has promised that the corona vaccine and corona testing will be done according to the stipulations of the central government
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X