ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

GHMC ಚುನಾವಣೆ: ಡಾ.ಕೆ.ಸುಧಾಕರ್‌ಗೆ 4 ಅಸೆಂಬ್ಲಿಗಳ ಹೊಣೆ

|
Google Oneindia Kannada News

ಹೈದರಾಬಾದ್, ನ 18: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. ಇಂದು ತೆಲಂಗಾಣ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದರು.

ಪಾಲಿಕೆ ಚುನಾವಣೆಯ ಸಹ-ಉಸ್ತುವಾರಿ ಹೊತ್ತಿರುವ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮಲ್ಕಾಗಿರಿ, ಖುತ್ಬುಲ್ಲಾಪುರ್, ಕುಕ್ಕಟ್ಪಲ್ಲಿ ಹಾಗೂ ಉಪ್ಪಳ್ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಚಿವ ಡಾ.ಕೆ.ಸುಧಾಕರ್, ಇಂದು ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡು, ಚುನಾವಣಾ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಹೈದರಾಬಾದ್ ಪಾಲಿಕೆ ಚುನಾವಣೆಗೆ ಪವನ್ ಕಲ್ಯಾಣ್ ಪಕ್ಷ ಎಂಟ್ರಿಹೈದರಾಬಾದ್ ಪಾಲಿಕೆ ಚುನಾವಣೆಗೆ ಪವನ್ ಕಲ್ಯಾಣ್ ಪಕ್ಷ ಎಂಟ್ರಿ

ಡಿಸೆಂಬರ್ 1ರಂದು ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ನವೆಂಬರ್ 20ರಂದು ನಾಮಪತ್ರ ಸಲ್ಲಿಸಲು ಕೊನೆ ದಿನಾಂಕವಾಗಿದೆ. ನವೆಂಬರ್ 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ಸಿ ಪಾರ್ಥಸಾರಥಿ ಹೇಳಿದ್ದಾರೆ.

ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ ಸುಧಾಕರ್

ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಿದ ಸುಧಾಕರ್

ಹೈದರಾಬಾದ್ ನ ರಾಜ್ಯ ಬಿಜೆಪಿ ಕಚೇರಿಗೆ ತೆರಳಿದ ಸಚಿವರು, ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಭಾಗವಹಿಸಿ ಚರ್ಚೆ ಮಾಡಿದರು. ಚುನಾವಣೆಯ ಉಸ್ತುವಾರಿ ಹೊತ್ತಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ.ಕೆ.ಅರುಣ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್, ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಮಹಾರಾಷ್ಟ್ರ ವಿಧಾನಸಭೆಯ ಮುಖ್ಯ ಸಚೇತಕ ಆಶಿಷ್ ಶೆಲ್ಲಾರ್, ಗುಜರಾತ್ ಬಿಜೆಪಿ ಹಿರಿಯ ನಾಯಕ ಪ್ರದೀಪ್ ಸಿಂಹ ವಘೇಲ, ಶಾಸಕ ಸತೀಶ್ ರೆಡ್ಡಿ, ರಾಜ್ಯ ಎಸ್.ಸಿ.ಮೋರ್ಚಾ ಅಧ್ಯಕ್ಷ ರಾಮುಲು, ಜನಪ್ರತಿನಿಧಿಗಳು ಹಾಗೂ ಇತರೆ ಮುಖಂಡರು ಸಭೆಯಲ್ಲಿದ್ದರು.

ಅಚ್ಚರಿಯ ಫಲಿತಾಂಶ ನೀಡುವ ಉತ್ಸಾಹ

ಅಚ್ಚರಿಯ ಫಲಿತಾಂಶ ನೀಡುವ ಉತ್ಸಾಹ

ಬಿಜೆಪಿ ಕೇಂದ್ರ ನಾಯಕರ ವಿಶ್ವಾಸ ಗಳಿಸಿರುವ ಕರ್ನಾಟಕ ಆರೋಗ್ಯ ಸಚಿವ ಡಾ. ಸುಧಾಕರ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ. ಗ್ರೇಟರ್ ಹೈದರಾಬಾದ್ ಮಹಾನಗರಪಾಲಿಕೆ ಚುನಾವಣೆಗೆ ಡಾ.ಸುಧಾಕರ್ ಅವರನ್ನು ಸಹ ಉಸ್ತುವಾರಿಯನ್ನಾಗಿ ರಾಷ್ಟ್ರಾಧ್ಯಕ್ಷ ಜೆ.ಪಿ,ನಡ್ಡಾ ನೇಮಿಸಿದ್ದಾರೆ.ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಭಾರಿಯನ್ನಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ನೇಮಿಸಲಾಗಿದೆ. ತೆಲಂಗಾಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿರುವ ಬಿಜೆಪಿ, ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿಯೂ ತನ್ನ ಶಕ್ತಿ ಪ್ರದರ್ಶನ ಮಾಡುವ ಮೂಲಕ ಸ್ಥಳೀಯ ಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸುವ ಗುರಿ ಹೊಂದಿದೆ.

2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಗೆ ಜಯ

2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಗೆ ಜಯ

2016ರಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಪಕ್ಷ 150ರಲ್ಲಿ 99 ಸ್ಥಾನಗಳಿಸಿ ಆಡಳಿತ ವಹಿಸಿಕೊಂಡಿತ್ತು. ಗ್ರೇಟರ್ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (GHMC) ವ್ಯಾಪ್ತಿಯಲ್ಲಿ 20 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 74 ಲಕ್ಷ ಮತದಾರರಿದ್ದಾರೆ. ಹೀಗಾಗಿ, ಆಡಳಿತಾರೂಢ ಟಿಆರ್ ಎಸ್ ಅಲ್ಲದೆ, ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಕೂಡಾ ಪಾಲಿಕೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಲು ಸೆಣಸಾಡಲಿವೆ.

150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಮತದಾನ

150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಮತದಾನ

150 ಸದಸ್ಯರ ಆಯ್ಕೆಗಾಗಿ ಡಿಸೆಂಬರ್ 01ರಂದು ಬೆಳಗ್ಗೆ 7 ರಿಂದ ಸಂಜೆ 6 ತನಕ ಮತದಾನದ ನಡೆಯಲಿದೆ. ಹಾಲಿ ಪಾಲಿಕೆ ಅವಧಿ ಫೆಬ್ರವರಿ 10, 2021ರಂದು ಕೊನೆಗೊಳ್ಳಲಿದೆ. ಸಾಮಾನ್ಯ ವರ್ಗದ ಮಹಿಳೆಗೆ ಈ ಬಾರಿ ಮೇಯರ್ ಸ್ಥಾನ ಮೀಸಲಾಗಿದೆ.

ಕೊವಿಡ್ 19 ಹಿನ್ನೆಲೆಯಲ್ಲಿ ಇವಿಎಂ ಬಳಕೆ ನಿರ್ಬಂಧ ವಿಧಿಸಿ, ಬ್ಯಾಲೆಟ್ ಪೇಪರ್ ಬಳಸಲು ಆಯೋಗ ನಿರ್ಧರಿಸಿದೆ. ಪ್ರಮುಖ ಪಕ್ಷಗಳು ಹಾಗೂ ಆರೋಗ್ಯ ಇಲಾಖೆ ಜೊತೆ ಮಾತುಕತೆ ನಡೆಸಿ, ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಆಯುಕ್ತರಾದ ಪಾರ್ಥಸಾರಥಿ ಹೇಳಿದ್ದಾರೆ.

English summary
GHMC polls 2020: Kanrataka health minister Sudhakar gets in charge of 4 Assembly constituencies in Hyderabad Muncipal Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X