ತಾಕತ್ತಿದ್ದರೆ ಮೊದಲು ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿಗೆ ಓವೈಸಿ ಸವಾಲು
ಹೈದರಾಬಾದ್, ನವೆಂಬರ್ 25: ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೊರೇಷನ್ (ಜಿಎಚ್ಎಂಸಿ) ಚುನಾವಣೆಯಲ್ಲಿ ಅಧಿಕಾರ ಪಡೆದುಕೊಳ್ಳಲು ಟಿಆರ್ಎಸ್ ಮತ್ತು ಎಐಎಂಐಎಂ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಹೇಳಿರುವ ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
'ಅಸಾದುದ್ದೀನ್ ಓವೈಸಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ ಎಂದು ನೀವು ಹೇಳುತ್ತೀರಿ. ನಿಮಗೆ ಮತ್ತೊಮ್ಮೆ ಹೇಳುತ್ತೇನೆ, ನಿಮಗೆ ನಿಜಕ್ಕೂ ಧೈರ್ಯವಿದ್ದರೆ, ಹಲವು ತಿಂಗಳಿನಿಂದ ಚೀನಾದ ಸೈನಿಕರು ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿರುವ ಲಡಾಖ್‌ನ ಎಲ್‌ಎಸಿಯ ಉದ್ದಕ್ಕೂ ಸರ್ಜಿಕಲ್ ಸ್ಟ್ರೈಕ್ ನಡೆಸಿ' ಎಂದು ಓವೈಸಿ ಸವಾಲು ಹಾಕಿದ್ದಾರೆ.
'ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಹೆಸರು ಹೇಳಲು ಭಯಪಡುತ್ತಾರೆ. ಅಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿ, ನಾನು ಖಂಡಿತಾ ನಿಮ್ಮನ್ನು ಶ್ಲಾಘಿಸುತ್ತೇನೆ. ನಮ್ಮ ಕೆಚ್ಚೆದೆಯ ಸೈನಿಕರು ಅಲ್ಲಿ ಪ್ರಾಣ ತೆತ್ತಿದ್ದಾರೆ. ಇಂದು ಆ ಭಾಗವನ್ನು ಚೀನಾದ ಪಡೆಗಳು ಆಕ್ರಮಿಸಿಕೊಂಡಿವೆ. ಅಲ್ಲಿ ಹೋಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ. ನೀವು ಹೇಳುತ್ತೀರಿ ಹಳೆಯ ನಗರದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆ ಎಂದು. ನಮಗಾಗಿ ನೀವೇನು ಮಾಡಿದ್ದೀರಿ?' ಎಂದು ವಾಗ್ದಾಳಿ ನಡೆಸಿದ್ದಾರೆ.

ಜಿಎಚ್ಎಂಸಿ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ್ದ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್, 'ಗೆಲುವಿನ ಬಗ್ಗೆ ಖಾತರಿಯಿಲ್ಲದ ಚಂದ್ರಶೇಖರ ರಾವ್ ತಮ್ಮ ಜತೆ ಮತ್ತೊಬ್ಬ ವ್ಯಕ್ತಿಯನ್ನು ಸೇರಿಸಿಕೊಂಡಿದ್ದಾರೆ. ಯಾರದು? ಅದು ಓವೈಸಿ. ಓವೈಸಿ ನಿನ್ನೆ ಹೇಳುತ್ತಿದ್ದರು, ಹೈದರಾಬಾದ್‌ನಲ್ಲಿ ರೊಹಿಂಗ್ಯಾಗಳಿದ್ದರೆ ಅಮಿತ್ ಶಾ ಏನು ಮಾಡುತ್ತಿದ್ದಾರೆ ಎಂದು. ಬಿಜೆಪಿ ಗೆದ್ದ ಬಳಿಕ ನಿಮ್ಮ 'ಹಳೆಯ ನಗರ'ದಲ್ಲಿ (ಹೈದರಾಬಾದ್) ವಾಸಿಸುತ್ತಿರುವ ಪಾಕಿಸ್ತಾನಿ, ಅಫ್ಘನ್ ಮತ್ತು ರೊಹಿಂಗ್ಯಾ ಮತದಾರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಅವರನ್ನು ಹೊರಹಾಕುವ ಜವಾಬ್ದಾರಿಯನ್ನು ಬಿಜೆಪಿ ತೆಗೆದುಕೊಳ್ಳುತ್ತದೆ' ಎಂದು ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications