ಹುಡುಗಿಯ ಖಾಸಗಿ ಫೋಟೊವಿಟ್ಟುಕೊಂಡು ಪೀಡಿಸುತ್ತಿದ್ದ ಟೆಕ್ಕಿ ಬಂಧನ

ಹೈದರಾಬಾದ್, ಜೂನ್ 27: ಹುಡುಗಿಯ ಖಾಸಗಿ ಫೋಟೊಗಳನ್ನು ತೋರಿಸಿ ಸಂಬಂಧವನ್ನು ಮುಂದುವರೆಸುವಂತೆ, ಮದುವೆಯಾಗುವಂತೆ ಪೀಡಿಸುತ್ತಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೈಬರ್ ಕ್ರೈಂ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಧ್ಯೆ ಭಿನ್ನಾಭಿಪ್ರಾಯಗಳು ಬಂದಿದ್ದು, ಯುವತಿ ಆತನಿಂದ ದೂರವಾಗಲು ಮುಂದಾಗಿದ್ದಳು.

ಇಬ್ಬರು ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದರು, ಆ ಸಂದರ್ಭದಲ್ಲಿ ಕೆಲವು ಫೋಟೊಗಳನ್ನು ಆ ಕ್ಲಿಕ್ಕಿಸಿಕೊಂಡಿದ್ದ.ಕೆಲವು ತಿಂಗಳ ನಂತರ ಈ ಜೋಡಿ ಬ್ರೇಕಪ್ ಮಾಡಿಕೊಂಡು ದೂರವಾಗಿದ್ದರು. ಇದಾದ ಬಳಿಕ ಯುವತಿ 2011 ರಲ್ಲಿ ಬೇರೊಬ್ಬ ಹುಡುಗನನ್ನು ಮದುವೆಯಾಗಿದ್ದಳು.

Harassing ex girl friend Hyderabad Techie arrested

ಆದರೆ ಇತ್ತೀಚೆಗೆ ಮಾಜಿ ಪ್ರಿಯಕರ ಟೆಕ್ಕಿ ಆಗಾಗ ಫೋನ್ ಮಾಡಿ ಬ್ರೇಕಪ್ ಮಾಡಿಕೊಂಡಿದ್ದ ಸಂಬಂಧವನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದನು. ಆದರೆ ಯುವತಿ ಅವನ ಬೇಡಿಕೆಯನ್ನು ಒಪ್ಪಿಕೊಂಡಿರಲಿಲ್ಲ. ಆಗ ಆಕೆಯ ನಗ್ನ ಫೋಟೋಗಳನ್ನು ಪತಿ ಮತ್ತು ಕುಟುಂಬ ಸದಸ್ಯರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದ.

ಅಷ್ಟೇ ಅಲ್ಲದೇ ಅವಾಚ್ಯ ಶಬ್ದದಿಂದ ನಿಂದಿಸಿ, ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಕೊನೆಗೆ ಆಕೆ ಪೊಲೀಸ್ ಠಾಣೆಗೆ ಹೋಗಿ ಟೆಕ್ಕಿ ವಿರುದ್ಧ ದೂರು ದಾಖಲಿಸಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+