ಕಾಂಗ್ರೆಸ್-ಜೆಡಿಎಸ್‌ಗೆ 18 ಸ್ಥಾನ: ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ

Recommended Video

      ಕರ್ನಾಟಕದಲ್ಲಿ ಮೈತ್ರಿ ಸರ್ಕಾರ 18 ಸೀಟುಗಳನ್ನ ಗೆಲ್ಲುತ್ತೆ ಎಂದು ಭರವಸೆ ನೀಡಿದ ಎಚ್ ಡಿ ಕೆ

      ತಿರುಮಲ, ಮೇ 18: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟವು ಕನಿಷ್ಠ 18 ರಿಂದ 19 ಸ್ಥಾನಗಳನ್ನು ಪಡೆದುಕೊಳ್ಳಲಿವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.

      ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶನಿವಾರ ಕುಟುಂಬ ಸಮೇತ ತಿರುಮಲ-ತಿರುಪತಿ ಕ್ಷೇತ್ರಕ್ಕೆ ಭೇಟಿ ನೀಡಿರುವ ಎಚ್.ಡಿ. ಕುಮಾರಸ್ವಾಮಿ, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

      ಕೇಂದ್ರದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ತಮ್ಮ ಬೆಂಬಲ ನೀಡುವ ವಿಚಾರದಲ್ಲಿ ತಮ್ಮ ನಿಲುವನ್ನು ಯಾವ ಕಾರಣಕ್ಕೂ ಬದಲಿಸುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

      HD Kumaraswamy in tirumala expressed confidence of 18 seats in Karnataka

      ಮೇ 23ರಂದು ಫಲಿತಾಂಶ ಬರುತ್ತದೆ. ಅಲ್ಲಿಯವರೆಗೂ ಕಾಯೋಣ. ನಾವು ಈಗಾಗಲೇ ಚುನಾವಣೆಯಲ್ಲಿ ಮತ್ತು ಕೇಂದ್ರದಲ್ಲಿ ಸರ್ಕಾರ ರಚಿಸುವ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೆ ನಾವು ಕಮಿಟ್ ಆಗಿದ್ದೇವೆ. ಫಲಿತಾಂಶದ ಬಳಿಕ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಹೇಳಿದರು.

      ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹೆಚ್ಚು ಸ್ಥಾನಗಳು ಲಭಿಸಲಿವೆ. ನನ್ನ ವಿಶ್ಲೇಷಣೆ ಪ್ರಕಾರ ಈ ಎರಡೂ ಪಕ್ಷಗಳು ಜತೆಗೂಡಿ 18-19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ಭರವಸೆ ವ್ಯಕ್ತಪಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+