ರಾಷ್ಟ್ರಗೀತೆಗೆ ಅಗೌರವ 3 ವಿದ್ಯಾರ್ಥಿಗಳ ಬಂಧನ
ಹೈದರಾಬಾದ್, ಆಗಸ್ಟ್ 21: ಹೈದರಾಬಾದಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಸ್ಥಳೀಯ ಪೊಲೀಸರು, ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಈ ಮೂವರು ವಿದ್ಯಾರ್ಥಿಗಳು ಭಾರತದ ರಾಷ್ಟ್ರಗೀತೆಗೆ ಗೌರವ ಸೂಚಿಸಿಲ್ಲ ಎಂಬ ಆರೋಪ ಹೊತ್ತಿದ್ದಾರೆ. ರಾಜೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಬಂಧಿತರನ್ನು ಜಮೀಲ್ ಗುಲ್, ಒಮರ್ ಫೈಜ್ ಹಾಗೂ ಮುದಾಸಿರ್ ಶಬ್ಬೀರ್ ಎಂದು ಗುರುತಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾಗೆ ಸೇರಿದವರಾಗಿದ್ದಾರೆ. ಛೆವೆಲ್ಲಾದಲ್ಲಿ ಮೂವರು ಇಂಜಿನಿಯರಿಂಗ್ ಓದುತ್ತಿದ್ದಾರೆ.
ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಪ್ರಸಾರವಾದ ವೇಳೆ ಈ ಮೂವರು ವಿದ್ಯಾರ್ಥಿಗಳು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆ ಎಂದು ದೂರು ದಾಖಲಾದ ಹಿನ್ನಲೆಯಲ್ಲಿ ಬಂಧಿಸಲಾಗಿದೆ.












Click it and Unblock the Notifications