ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್
ಹೈದರಾಬಾದ್, ಫೆ.21 : ವಿಮಾನವೊಂದರಲ್ಲಿ ಭಾರೀ ಪ್ರಮಾಣದ ಸ್ಫೋಟಗಳನ್ನು ಸಾಗಿಸಲಾಗುತ್ತಿದೆ ಎಂಬ ಬೆದರಿಕೆ ಪತ್ರಬಂದ ಹಿನ್ನಲೆಯಲ್ಲಿ ಹೈದರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಹೈ ಅಲರ್ಟ್ ಘೋಷಿಸಲಾಗಿದೆ. ವಿಮಾನ ನಿಲ್ದಾಣದ ಭದ್ರತೆಗೆ ಕೈಗಾರಿಕಾ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ತಪಾಸಣೆ ನಡೆಸಲಾಗುತ್ತಿದೆ.
ಶುಕ್ರವಾರ ವಿಮಾಣ ನಿಲ್ದಾಣದ ಭದ್ರತಾ ಅಧಿಕಾರಿಗೆ ಬೆದರಿಕೆ ಪತ್ರವೊಂದು ಬಂದಿದ್ದು, ವಿಮಾನವೊಂದರ ಮೂಲಕ ಭಾರಿ ಪ್ರಮಾಣದ ಸ್ಫೋಟಕಗಳನ್ನು ಸಾಗಿಸಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಸ್ಪೋಟಕಗಳನ್ನು ಹೊತ್ತಿರುವ ವಿಮಾನ ಹೈದರಾಬದ್ ಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಆದ್ದರಿಂದ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಹೈದರಾಬಾದ್ ವಿಮಾನ ನಿಲ್ದಾಣದಲ್ಲಿಯೇ ಸ್ಫೋಟಕಗಳನ್ನು ಸ್ಫೋಟಿಸುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಆದ್ದರಿಂದ ವಿಮಾನ ನಿಲ್ದಾಣ ಮತ್ತು ಸುತ್ತಮತ್ತಲಿನ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನಿಲ್ದಾಣದ ಹೆಚ್ಚುವರಿ ಭದ್ರತೆಗಾಗಿ ಕೈಗಾರಿಕಾ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. [ಶಿರಡಿಯಲ್ಲಿ ವಿಮಾನ ನಿಲ್ದಾಣ]
ಎರಡು ದಿನಗಳ ಹಿಂದೆ ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿಧೇಯಕ ಅಂಗೀಕಾರವಾದ ನಂತರ ಈ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ ಮತ್ತು ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. [ಆಂಧ್ರವಿಭಜನೆ ನೋವು-ನಲಿವು]
ಬೆದರಿಕೆ ಪತ್ರ ತಮಗೆ ಬಂದಿದ್ದು ಆದ್ದರಿಂದ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಬಗ್ಗೆ ವಿಮಾನ ನಿಲ್ದಾಣ ಭದ್ರತೆಯ ಹೆಚ್ಚುವರಿ ನಿರ್ದೇಶಕ ಒ.ಪಿ.ಸಿಂಗ್ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.












Click it and Unblock the Notifications