ಅಮೆರಿಕದಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿ ಹತ್ಯೆ
ಹೈದರಾಬಾದ್, ಜೂ. 15 : ಹೈದರಾಬಾದ್ ಮೂಲದ ವಿದ್ಯಾರ್ಥಿಯೊಬ್ಬನನ್ನು ಅಮೆರಿಕದಲ್ಲಿ ಗುಂಡಿಟ್ಟಯ ಹತ್ಯೆ ಮಾಡಲಾಗಿದೆ. ಮೃತ ವಿದ್ಯಾರ್ಥಿ ಕಳೆದ ತಿಂಗಳು ಅಮೆರಿಕಕ್ಕೆ ತೆರಳಿದ್ದರು, ದರೋಡೆಕೋರರು ಈ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಭಾನುವಾರ ಸಾಯಿ ಕಿರಣ್ (21) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಹೈದರಾಬಾದ್‌ನಲ್ಲಿರುವ ಕುಟುಂಬ ವರ್ಗ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. ಫ್ಲೋರಿಡಾದ ಮಿಯಾಮಿ ವಿವಿಯಲ್ಲಿ ಉನ್ನತ ವ್ಯಾಸಂಗ ಮಾಡಲು ಮೇ ತಿಂಗಳಿನಲ್ಲಿ ಕಿರಣ್ ಅಮೆರಿಕಕ್ಕೆ ತೆರಳಿದ್ದರು.

ದರೋಡೆಕೋರರ ಗುಂಪು ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಕಿರಣ್ ಅವರ ಐ-ಪೋನ್ ಕಳುವಾಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಕುಟುಂಬವರ್ಗದವರು ತೆಲಂಗಾಣ ಮತ್ತು ಕೇಂದ್ರ ಸರ್ಕಾರಕ್ಕೆ ಕಿರಣ್ ಮೃತದೇಹ ತರಲು ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ. [ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ವಿದ್ಯಾರ್ಥಿನಿ ಹತ್ಯೆ]












Click it and Unblock the Notifications