• search
 • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೈದರಾಬಾದ್; ಖಾಸಗಿ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಸರ್ಕಾರ

|

ಹೈದರಾಬಾದ್, ಆಗಸ್ಟ್ 04: ಕೋವಿಡ್ ಚಿಕಿತ್ಸೆಗೆ ಹೆಚ್ಚಿನ ದರ ವಿಧಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ತೆಲಂಗಾಣ ಸರ್ಕಾರ ತಕ್ಕ ಪಾಠ ಕಲಿಸಲಿದೆ. ಈಗಾಗಲೇ ಒಂದು ಆಸ್ಪತ್ರೆಗೆ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಬಾರದು ಎಂದು ನಿಷೇಧ ಹೇರಲಾಗಿದೆ.

   DK Shivakumar : ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ | Oneindia Kannada

   ಹೈದರಾಬಾದ್‌ನ ಡೆಕ್ಕನ್ ಆಸ್ಪತ್ರೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಹೆಚ್ಚಿನ ದರ ವಸೂಲಿ ಮಾಡುತ್ತಿತ್ತು. ಈ ಕುರಿತು ಆರೋಗ್ಯ ಇಲಾಖೆಗೆ ಹಲವು ದೂರುಗಳು ಬಂದಿದ್ದವು.

   ತೆಲಂಗಾಣ ಸರ್ಕಾರ ಆಸ್ಪತ್ರೆಗೆ ಹೊಸ ಕೋವಿಡ್ ರೋಗಿಗಳನ್ನು ದಾಖಲು ಮಾಡಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದೆ. ಈಗಿರುವ ರೋಗಿಗಳ ಚಿಕಿತ್ಸೆಗೆ ತೊಂದರೆ ಆಗಬಾರದು, ಹೆಚ್ಚಿನ ದರ ನಿಗದಿ ಮಾಡಬಾರದು ಎಂದು ಸೂಚಿಸಲಾಗಿದೆ.

   ರಾಜ್ಯದ ಆರೋಗ್ಯ ಇಲಾಖೆ ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ನಿಗದಿ ಮಾಡಿದರೆ ಲೈಸೆನ್ಸ್ ರದ್ದು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ.

   ತೆಲಂಗಾಣದಲ್ಲಿಯೂ ಅದರಲ್ಲಿಯೂ ಹೈದರಾಬಾದ್ ನಗರದ ಹಲವು ಖಾಸಗಿ ಆಸ್ಪತ್ರೆಗಳು ಹೆಚ್ಚಿನ ದರವನ್ನು ವಸೂಲಿ ಮಾಡುತ್ತಿವೆ ಎಂಬ ದೂರುಗಳಿವೆ. ವಿಮೆ ಇರುವ, ಸರ್ಕಾರಿ ಕಾರ್ಡ್‌ಗಳ ಫಲಾನುಭವಿ ರೋಗಿಗಳನ್ನು ಆಸ್ಪತ್ರೆಗಳು ದಾಖಲು ಮಾಡಿಕೊಳ್ಳುತ್ತಿಲ್ಲ.

   ಡೆಕ್ಕನ್ ಆಸ್ಪತ್ರೆ ಕೋವಿಡ್ ರೋಗಿಯೊಬ್ಬರಿಗೆ 3 ಲಕ್ಷ ರೂ. ಬಿಲ್ ನೀಡಿತ್ತು. ಈ ಬಗ್ಗೆ ರೋಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ.

   English summary
   Telangana government issued the order barring Deccan hospitals in Hyderabad from treating Covid-19 patients. Health department received complaint against hospital for over charging for COVID treatment.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X