ನಾನು ಯೋಧ, ಭಿಕ್ಷುಕನಲ್ಲ: ಬಿಜೆಪಿ, ಕಾಂಗ್ರೆಸ್ಸಿಗೆ ಕೆಸಿಆರ್ ತಪರಾಕಿ!
Recommended Video

ಹೈದರಾಬಾದ್, ಡಿಸೆಂಬರ್ 03: "ನಾನು ಯೋಧ, ಭಿಕ್ಷುಕನಲ್ಲ. ನನಗೆ ಭಾರತದ ರಾಜಕೀಯದಲ್ಲಿ ಬದಲಾವಣೆ ಬೇಕು. ಅದಕ್ಕಾಗಿ ನಾನು ಸಾಧ್ಯವಾದಷ್ಟು ಪ್ರಯತ್ನಿಸುತ್ತೇನೆ" ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಬಿಜೆಪಿ ಮತ್ತು ಕಾಂಗ್ರೆಸ್ಸಿಗೆ ತಪರಾಕಿ ನೀಡಿದ್ದಾರೆ.
ತೆಲಂಗಾಣದಲ್ಲಿ ಡಿಸೆಂಬರ್ 7 ರಂಡು ನಡೆಯಲಿರುವ ಚುನಾವಣೆಯ ಸಲುವಾಗಿ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿದ್ದ ಅವರು, ರಾಷ್ಟ್ರೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಮತ್ತು ಕಾಂಗ್ರೆಸ್ ಅನ್ನು ಹೊರಗಿಟ್ಟು ತೃತೀಯ ರಂಗ ನಿರ್ಮಿಸುವ ಬಗ್ಗೆಯೂ ಈ ಸಂದರ್ಭದಲ್ಲಿ ಅವರು ಮಾತನಾಡಿದರು. ಈ ತೃತೀಯ ರಂಗದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನೂ ಸೇರಿಸಿಕೊಳ್ಳುವುದಾಗಿ ಅವರು ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿ ಯಾರು ಉತ್ತಮರು ಎಂದು ಕೇಳುವ ಪ್ರಶ್ನೆಯೇ ಇಲ್ಲ. ಎರಡು ಪಕ್ಷಗಳೂ ಅಷ್ಟೇ ಕೆಳಮಟ್ಟಕ್ಕಿಳಿದಿದ್ದಾರೆ. ಅವರು ಏನನ್ನು ಮಾಡಬೇಕೋ ಅದನ್ನು ಮಾಡುತ್ತಿಲ್ಲ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.
ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ. ಹಾಲಿ ಮುಖ್ಯಮಂತ್ರಿ ತೆಲಂಗಾಣ ರಾಷ್ಟ್ರ ಪಕ್ಷದ ಮುಖಂಡ ಕೆ ಚಂದ್ರಶೇಖರ್ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸಿದ್ದರಿಂದ ತೆಲಂಗಾಣದಲ್ಲಿ ಡಿಸೆಂಬರ್ ನಲ್ಲೇ ಚುನಾವಣೆ ನಡೆಯುತ್ತಿದೆ.












Click it and Unblock the Notifications