ಹೈದರಾಬಾದ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಹೈದರಾಬಾದ್, ಫೆಬ್ರವರಿ 03 : ಹೈದರಾಬಾದ್‌ನ ಐಐಟಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊದಲು ಮೊಬೈಲ್‌ನಲ್ಲಿ ಮಾತನಾಡುತ್ತಾ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು.

21 ವರ್ಷದ ಎಂ.ಅನಿರುಧ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಸ್ಟೆಲ್ ಕಟ್ಟಡದ 7ನೇ ಅಂತಸ್ತಿನಿಂದ ಬಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಿಕಂದರಾಬಾದ್ ಮೂಲದ ಎಂ.ಅನಿರುಧ್ಯ ಮೊಬೈಲ್‌ನಲ್ಲಿ ಮಾತನಾಡುವಾಗ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಸಂಗಾರೆಡ್ಡಿ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಡೆತ್ ನೋಟ್ ಪತ್ತೆಯಾಗಿದೆ.

IIT student commits suicide in Hyderabad

ಗುರುವಾರ ಬೆಳಗ್ಗೆ ಎಂ.ಅನಿರುಧ್ಯ ತನ್ನ ಸ್ನೇಹಿತನಿಗೆ ಡೆತ್‌ನೋಟ್‌ ಅನ್ನು ಈ ಮೇಲ್ ಮಾಡಿದ್ದ. 'ನನ್ನ ಜೀವನನ್ನು ಕೊನೆಗೊಳಿಸುತ್ತಿದ್ದೇನೆ' ಎಂದು ಡೆತ್‌ನೋಟ್‌ನಲ್ಲಿ ಎಂ.ಅನಿರುಧ್ಯ ಬರೆದಿದ್ದು, ಪೊಲೀಸರಿಗೆ ಡೆತ್ ನೋಟ್ ಸಿಕ್ಕಿದೆ.

'ನನ್ನ ಮುಂದಿನ ಭವಿಷ್ಯವನ್ನು ಅಂದಾಜಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ನನ್ನ ನಿರ್ಧಾರದಲ್ಲಿ ಯಾರ ಒಳಸಂಚಿಲ್ಲ. ನನ್ನ ಜೀವನ ದಿನದಿಂದ ದಿನಕ್ಕೆ ಕಷ್ಟವಾಗುತ್ತಿದೆ. ಹೀಗಾಗಿ ನಾನು ಜೀವನವನ್ನು ಇಲ್ಲಿಗೆ ಕೊನೆಗೊಳಿಸುವ ನಿರ್ಧಾರ ಮಾಡಿದ್ದಾನೆ' ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+