ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: ಶುಭ ಸುದ್ದಿ ಆಗಸ್ಟ್ 15ಕ್ಕೆ ಸ್ವದೇಶಿ ಲಸಿಕೆ ಬಿಡುಗಡೆ

|
Google Oneindia Kannada News

ಹೈದರಾಬಾದ್, ಜುಲೈ 03: ಕೊರೊನಾವೈರಸ್ ವಿರುದ್ಧ ಲಸಿಕೆ, ಔಷಧ ಕಂಡು ಹಿಡಿಯಲು ಭಾರತ ವಿಜ್ಞಾನಿಗಳು, ಸಂಶೋಧಕರು ಶ್ರಮಿಸುತ್ತಿದ್ದಾರೆ. ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ಸಿಕ್ಕಿದ್ದು, ಕ್ಲಿನಿಕಲ್ ಟ್ರಯಲ್ ಭರದಿಂದ ಸಾಗಿದೆ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನದಂದು ಲಸಿಕೆಯನ್ನು ಮಾರುಕಟ್ಟೆಗೆ ತರಲು ಯೋಜಿಸಲಾಗಿದೆ.

Recommended Video

ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ಹೈದರಾಬಾದ್ ಮೂಲದ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ತಯಾರಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಕ್ಲಿನಿಕಲ್ ಟ್ರಯಲ್ ಗೆ ಬಳಸಬಹುದು ಎಂದು ಡ್ರಗ್ ಕಂಟ್ರೋಲರ್ ಜನರಲ್ ಅಫ್ ಇಂಡಿಯಾ(ಡಿಸಿಜಿಐ) ಅನುಮತಿ ನೀಡಿದ್ದು ನೆನಪಿರಬಹುದು.

ಈಗ ಕ್ಲಿನಿಕಲ್ ಟ್ರಯಲ್ ಮುಗಿಸಿ ಆಗಸ್ಟ್ 15ಕ್ಕೆ ಮಾರುಕಟ್ಟೆ ಹೊರತರುವಂತೆ ಭಾರತ್ ಬಯೋಟೆಕ್ ಸಂಸ್ಥೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಸೂಚಿಸಿದೆ.

ಕೊರೊನಿಲ್ ಕಿಟ್ ಲೈಸನ್ಸ್ ಗೊಂದಲ: ಆಚಾರ್ಯ ಬಾಲಕೃಷ್ಣ ಸ್ಪಷ್ಟನೆಕೊರೊನಿಲ್ ಕಿಟ್ ಲೈಸನ್ಸ್ ಗೊಂದಲ: ಆಚಾರ್ಯ ಬಾಲಕೃಷ್ಣ ಸ್ಪಷ್ಟನೆ

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಗೆ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್ಐಜಿ) ಸಹಕಾರ ನೀಡಿವೆ.'

ಹೈದರಾಬಾದ್ ನಲ್ಲಿ ಅಭಿವೃದ್ಧಿಪಡಿಸಿದ ಲಸಿಕೆ

ಹೈದರಾಬಾದ್ ನಲ್ಲಿ ಅಭಿವೃದ್ಧಿಪಡಿಸಿದ ಲಸಿಕೆ

ಹೈದರಾಬಾದ್ ನಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗೆ ಕೊವ್ಯಾಕ್ಸಿನ್ ಎಂದು ಹೆಸರಿಡಲಾಗಿದೆ. ಇದು ದೇಶದ ಮೊದಲ ಸ್ಥಳೀಯ ಲಸಿಕೆಯಾಗಿದ್ದು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ, ಜುಲೈ 2020ರಲ್ಲಿ ಮೊದಲ ಹಂತದ ಕ್ಲಿನಿಕಲ್ ಟ್ರಯಲ್ ಆರಂಭವಾಗಲಿದೆ ಎಂದು ಭಾರತ್ ಬಯೋಟೆಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ತಿಳಿಸಿದ್ದಾರೆ.

ಕನಿಷ್ಠ ಎರಡು ಹಂತದ ಕ್ಲಿನಿಕಲ್ ಟ್ರಯಲ್

ಕನಿಷ್ಠ ಎರಡು ಹಂತದ ಕ್ಲಿನಿಕಲ್ ಟ್ರಯಲ್

ಹೈದರಾಬಾದಿನ ಜಿನೋಮ್ ವ್ಯಾಲಿಯ ಪ್ರಯೋಗಾಲಯದಿಂದ ಹೊರ ಬಂದಿರುವ ಕೊವ್ಯಾಕ್ಸಿನ್ ನ ಕ್ಲಿನಿಕಲ್ ಟ್ರಯಲ್ ಅವಧಿ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಆದರೆ, ಈಗ ಆಗಸ್ಟ್ 15ರೊಳಗೆ ಮೊದಲ ಹಂತದ ಔಷಧಿ ಹೊರತರಬೇಕಾಗಿರುವುದರಿಂದ ಕನಿಷ್ಠ ಎರಡು ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾದ ಬಳಿಕ ಮಾರುಕಟ್ಟೆಯಲ್ಲಿ ಲಸಿಕೆ ಲಭ್ಯವಾಗಲಿದೆ.

ಕೃಷ್ಣಾ ಸ್ಥಾಪಿಸಿದ ಭಾರತ್ ಬಯೋಟೆಕ್

ಕೃಷ್ಣಾ ಸ್ಥಾಪಿಸಿದ ಭಾರತ್ ಬಯೋಟೆಕ್

ಭಾರತದ ವಿಜ್ಞಾನಿ ಇ ಕೃಷ್ಣಾ ಸ್ಥಾಪಿಸಿದ ಭಾರತ್ ಬಯೋಟೆಕ್, ಹೈದರಾಬಾದಿನಲ್ಲಿ ಕೇಂದ್ರ ಕಚೆರಿ ಹೊಂದಿದೆ. ಈ ಹಿಂದೆ ಹಂದಿಜ್ವರ, ಎಚ್ 1 ಎನ್ 1 ವಿರುದ್ಧ HNVAC ಎಂಬ ವ್ಯಾಕ್ಸಿನ್ ಹೊರ ತಂದಿತ್ತು. ಈಗ ಕೃಷ್ಣಾ ಅವರ ನೇತೃತ್ವದಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಾಗುತ್ತಿದ್ದು, ಸರ್ಕಾರಿ ಸ್ವಾಮ್ಯದ ಇಂಡಿಯನ್ ಕೌನ್ಸಿಲ್ ಅಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್ಐಜಿ) ಸಹಕಾರ ನೀಡಿವೆ.

ಬೆಳಗಾವಿಯಲ್ಲೂ ಕ್ಲಿನಿಕಲ್ ಟ್ರಯಲ್

ಬೆಳಗಾವಿಯಲ್ಲೂ ಕ್ಲಿನಿಕಲ್ ಟ್ರಯಲ್

ಕರ್ನಾಟಕದ ಬೆಳಗಾವಿಯ ಜೀವನ್ ಸಖಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ 12 ಆಸ್ಪತ್ರೆಗಳಲ್ಲಿ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತಿದೆ. ಏಮ್ಸ್ ದೆಹಲಿ ಹಾಗೂ ಹೈದರಾಬಾದ್, ನಿಜಾಮ್ಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲೂ ರೋಗಿಗಳ ಮೇಲೆ ಈ ಲಸಿಕೆಯ ಮೊದಲ ಪ್ರಯೋಗ ನಡೆಯಲಿದೆ.

English summary
India's first indegenous coronavirus vaccine may be launched by August 15, with the Indian Council of Medical Research (ICMR) fast-tracking efforts to develop "COVAXIN" in partnership with Bharat Biotech International Limited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X