ಮಹಿಳಾ ದಿನ; ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆ
ಹೈದರಾಬಾದ್, ಮಾರ್ಚ್ 07; ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ತೆಲಂಗಾಣ ಸರ್ಕಾರ ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ನೀಡಿದೆ. ಮಾರ್ಚ್ 8ರ ಸೋಮವಾರ ಮಹಿಳೆಯರಿಗೆ ವಿಶೇಷ ಸಾಂದರ್ಭಿಕ ರಜೆ ಸಿಗಲಿದೆ.
ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಈ ಕುರಿತು ಸೂಚನೆ ನೀಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೆಶ್ ಕುಮಾರ್ ಈ ಕುರಿತು ಅಧಿಕೃತವಾದ ಆದೇಶವನ್ನು ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ಎಲ್ಲಾ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಅಭಿವೃದ್ಧಿ ಕಾರ್ಯಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಮಹಿಳೆಯರಿಗೆ ಅವಕಾಶಗಳನ್ನು ನೀಡಿದರೆ ಅದ್ಭುತಗಳನ್ನು ಸೃಷ್ಟಿ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ. ಸರ್ಕಾರ ರಚನೆ ಮಾಡಿರುವ SHE ತಂಡಗಳು ಹಿರಿಯ ಮಹಿಳೆಯರಿಗೆ, ಒಂಟಿ ಮಹಿಳೆಯರಿಗೆ, ಪತಿಯನ್ನು ಕಳೆದುಕೊಂಡವರಿಗೆ ಅಗತ್ಯ ನೆರವು ನೀಡಲು ಸಹಕಾರಿ ಆಗಲಿದೆ ಎಂದು ಕೆ. ಚಂದ್ರಶೇಖರಾವ್ ತಿಳಿಸಿದ್ದಾರೆ.
ಮಹಿಳೆಯರಿಗೆ ರಕ್ಷಣೆ ನೀಡುವ ವಿಚಾರದಲ್ಲಿ ತೆಲಂಗಾಣ ಮುಂದಿದೆ. ಆಶಾ ಕಾರ್ಯಕರ್ತೆ ಮತ್ತು ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಸರ್ಕಾರ ಹೆಚ್ಚಳ ಮಾಡಿದೆ. ಕಲ್ಯಾಣ ಲಕ್ಷ್ಮೀ ಮತ್ತು ಕೆಸಿಆರ್ ಕಿಟ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.












Click it and Unblock the Notifications