ಆಪರೇಷನ್ ಬಳಿಕ ರಕ್ತಸ್ರಾವ, ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ
ಹೈದರಾಬಾದ್, ಡಿಸೆಂಬರ್ 27: ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಎಚ್1ಎನ್1ನಿಂದ ಬಳಲುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೃದಯ ಶ್ವಾಸಕೋಶ ಚಿಕಿತ್ಸೆ ನಡೆಸಲಾಗಿದ್ದು, ಇದರಿಂದ ಸ್ವಲ್ಪ ಚೇತರಿಸಿಕೊಂಡಿದ್ದರು, ಆದರೆ ಮತ್ತೊಮ್ಮೆ ಹೃದಯದ ಶ್ವಾಸಕೋಶ ಯಂತ್ರ ಬದಲಿಸುವ ಪ್ರಯತ್ನ ವಿಫಲಗೊಂಡಿದ್ದು ತೀವ್ರ ರಕ್ತಸ್ರಾವ ಉಂಟಾಗಿದೆ.
ಮಧುಕರ್ ಶೆಟ್ಟಿ ಕಳೆದೊಂದು ವಾರದಿಂದ ಹೈದರಾಬಾದಿನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದಯ ಕವಾಟದಲ್ಲಿ ಹೆಚ್ಚು ಹಾನಿಯಾಗಿರುವುದರಿಂದ ಇತರೆ ಅಂಗಗಳಿಗೆ ರಕ್ತ ಸಂಚಾರ ಸರಿಯಾಗಿ ಆಗುತ್ತಿಲ್ಲ ಎಂಬುದು ತಿಳಿದುಬಂದಿದೆ. ಕೆಲವು ಗಂಟೆಗಳ ಬಳಿಕ ಐಪಿಎಸ್ ಅಧಿಕಾರಿಯನ್ನು ಎಖ್ಮೋ ಸಿಸ್ಟಂಗೆ ಬದಲಿಸಿಕೊಳ್ಳಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

1999ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ, ಕರ್ನಾಟಕದ ಉಡುಪಿ ಜಿಲ್ಲೆಯವರು. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ಅವರು ದೆಹಲಿಯ ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಸಮಾಜ ಶಾಸ್ತ್ರದಲ್ಲಿ ಎಂಎ ಮಾಡಿದ್ದಾರೆ.
ಜತೆಗೆ ತೆಲಂಗಾಣ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮುಖ್ಯ ಕಾರ್ಯದರ್ಶಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕ ಸರ್ಕಾರ ಈಗಾಗಲೇ ಸಿಐಡಿ ಎಡಿಜಿಪಿ ಪ್ರತಾಪ್ ರೆಡ್ಡಿಯವರನ್ನು ಚಿಕಿತ್ಸೆ ಮೇಲ್ವಿಚಾರಣೆಗೆ ನೇಮಿಸಿದ್ದು ಹೈದರಾಬಾದ್ಗೆ ಹೋಗುತ್ತಿದ್ದಾರೆ.












Click it and Unblock the Notifications