ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ

|
Google Oneindia Kannada News

ಹೈದರಾಬಾದ್, ಡಿಸೆಂಬರ್ 28 : ಎಚ್ 1 ಎನ್‌ 1ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶರಾದರು. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಅವರು ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಶುಕ್ರವಾರ ರಾತ್ರಿ 8.15ರ ಸುಮಾರಿಗೆ 47 ವರ್ಷದ ಮಧುಕರ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಮಧುಕರ ಶೆಟ್ಟಿ ಅವರು ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಆಪರೇಷನ್ ಬಳಿಕ ರಕ್ತಸ್ರಾವ, ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರಆಪರೇಷನ್ ಬಳಿಕ ರಕ್ತಸ್ರಾವ, ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ

1999ನೇ ಬ್ಯಾಚ್ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಅವರು ಉಡುಪಿ ಜಿಲ್ಲೆಯವರು. ಯುಪಿಎಸ್‌ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿ ಆಗುವ ಮುನ್ನ ಅವರು ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ ಸಮಾಜ ಶಾಸ್ತ್ರದಲ್ಲಿ ಎಂ.ಎ ವ್ಯಾಸಂಗ ಮಾಡಿದ್ದರು.

IPS officer Madhukar Shetty no more

ಎಚ್1 ಎನ್‌1ನಿಂದ ಬಳಲುತ್ತಿದ್ದ ಮಧುಕರ ಶೆಟ್ಟಿ ಅವರು ಕಳೆದ ಒಂದು ವಾರದಿಂದ ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ದಿನಗಳಿಂದ ಅವರು ಪ್ರಜ್ಞೆಯನ್ನು ಕಳೆದುಕೊಂಡಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕ್ಕಮಗಳೂರು ಎಸ್‌ಪಿಯಾಗಿ ಕೆಲಸ ಮಾಡಿದ್ದ ಮಧುಕರ ಶೆಟ್ಟಿ ಅವರು ಬೆಂಗಳೂರು ಲೋಕಾಯುಕ್ತ ಎಸ್ಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. 2011ರಲ್ಲಿ ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಐದು ವರ್ಷಗಳ ಬಳಿಕ ವಾಪಸ್ ಆಗಿದ್ದರು.

ಐಜಿಪಿಯಾಗಿ ಬಡ್ತಿ ಪಡೆದ ಅವರು ಕೆಲವು ಕಾಲ ಪೊಲೀಸ್ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಅವರು ಕೇಂದ್ರ ಸೇವೆಗೆ ತೆರಳಿದ್ದರು. ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಹ ಮಧುಕರ ಶೆಟ್ಟಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದರು.

English summary
1999 batch IPS officer Madhukar Shetty no more. Madhukar Shetty was battling for his life in a Hyderabad hospital. He is suffering from H1N1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X