ಜನಾರ್ದನ ರೆಡ್ಡಿ ಹೈದರಾಬಾದ್‌ನಲ್ಲಿ ಅಡಗಿಲ್ಲ: ಪೊಲೀಸರ ಸ್ಪಷ್ಟನೆ

Recommended Video

      Janardhana Reddy Ponzi Scam : ಜನಾರ್ಧನ ರೆಡ್ಡಿ ಹೈದರಾಬಾದ್ ನಲ್ಲಿ ಇಲ್ಲ | ಪೋಲೀಸರ ಸ್ಪಷ್ಟನೆ|Oneindia Kannada

      ಹೈದರಾಬಾದ್, ನವೆಂಬರ್ 8: ಬಹುಕೋಟಿ ಹಣ ವಂಚನೆ ಪ್ರಕರಣದಲ್ಲಿ ಪೊಲೀಸರು ಹುಡುಕುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೈದರಾಬಾದ್ ನಗರದಲ್ಲಿ ಅಡಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

      ರೆಡ್ಡಿ ಹೈದರಾಬಾದ್‌ನಲ್ಲಿ ಬಚ್ಚಿಟ್ಟುಕೊಂಡಿದ್ದಾರೆ ಎಂದು ಅನಗತ್ಯವಾಗಿ ಸುಳ್ಳು ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸೈಬರಾದಾಬ್ ಕಮಿಷನರ್ ವಿಸಿ ಸಜ್ಜನರ್ ಸ್ಪಷ್ಟನೆ ನೀಡಿದ್ದಾರೆ.

      ವರದಿಗಳ ಪ್ರಕಾರ ಜನಾರ್ದನ ರೆಡ್ಡಿ ತಮ್ಮ ಸೆಲ್‌ ಫೋನ್ ಅನ್ನು ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ.

      Janardhana Reddy

      2017ರಲ್ಲಿ ಬಹುಕೋಟಿ ವಂಚನೆ ಆರೋಪದಲ್ಲಿ ಆಂಬಿಡೆಂಟ್ ಕಂಪನಿ ಮಾಲೀಕ ಫರೀದ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಗಾಲಿ ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಸಹಾಯಕ ಮೆಹಫೂಜ್ ಅಲಿ ಖಾನ್ ಹೆಸರು ಬಾಯ್ಬಿಟ್ಟಿದ್ದಾನೆ.

      ಆಂಬಿಡೆಂಟ್ ಕಂಪನಿ ಹಣ ದ್ವಿಗುಣ (ಶೇ30-40 ಬಡ್ಡಿ) ವಂಚನೆ ಪ್ರಕರಣಕ್ಕೆ ಹೊಂದಿಕೊಂಡಂತೆ ರೆಡ್ಡಿ ಅವರ ಡೀಲಿಂಗ್ ವಿಷಯ ಪೊಲೀಸರಿಗೆ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಅಲಿ ಖಾನ್ ಹಾಗೂ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+