ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್‌ಗೆ ಲಘು ಹೃದಯಾಘಾತ
Recommended Video

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್‌ಗೆ ಲಘು ಹೃದಯಾಘಾತ..! |Oneindia Kannada
ಹೈದರಾಬಾದ್, ಮಾರ್ಚ್ 16: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್. ವಿಶ್ವನಾಥ್ ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಹೈದರಾಬಾದ್‌ನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿಶ್ವನಾಥ್ ಅವರ ಆರೋಗ್ಯ ಚೇತರಿಸಿಕೊಂಡ ಬಳಿಕ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ.
ಹೈದರಾಬಾದ್‌ನಲ್ಲಿ ಶುಕ್ರವಾರ ಕುರುಬ ಸಮಾವೇಶ ನಡೆಸಲಾಗಿತ್ತು. ಅದರಲ್ಲಿ ಭಾಗವಹಿಸುವ ಸಲುವಾಗಿ ವಿಶ್ವನಾಥ್ ಅವರು ಅಲ್ಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಲಘು ಹೃದಯಾಘಾತಕ್ಕೆ ಒಳಗಾಗಿದ್ದಾರೆ.

ಕಳೆದ ವರ್ಷ ಅವರು ಮೂತ್ರಪಿಂಡದಲ್ಲಿ ಕಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಅವರು ಸುದೀರ್ಘ ಕಾಲ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆದುಕೊಂಡಿದ್ದರು. ಆಸ್ಪತ್ರೆಯಿಂದ ಬಿಡುಗಡೆಗೊಂಡು ಚೇತರಿಸಿಕೊಂಡ ಬಳಿಕ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕವಾಗಿದ್ದರು.












Click it and Unblock the Notifications