• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರೀ ಮಳೆ ವರದಿ ಮಾಡಲು ಹೋಗಿದ್ದ ಪತ್ರಕರ್ತ ಜಮೀರ್ ಸಾವು

|
Google Oneindia Kannada News

ತೆಲಂಗಾಣ ಜು.15: ತೆಲಂಗಾಣ ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಭಾರೀ ಮಳೆ ಸುರಿದಿತ್ತು. ಈ ವೇಳೆ ಭಾರೀ ಮಳೆಯ ವರದಿ ಮಾಡಲು ತೆರಳಿದ್ದ ನಾಪತ್ತೆಯಾಗಿದ್ದ ಪತ್ರಕರ್ತ ಒಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮೃತ ಪತ್ರಕರ್ತ ಜಮೀರ್ (36) ತೆಲಂಗಾಣದ ಜಗ್ತಿಯಾಲ್ ಪಟ್ಟಣ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಜಮೀರ್ ಜಗ್ತಿಯಾಲ್‌ನಲ್ಲಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ತೆಲಂಗಾಣದಲ್ಲಿ ಸುರಿದ ಭಾರೀ ಮಳೆಯ ಬಗ್ಗೆ ವರದಿ ಮಾಡಲು ತೆರಳುತ್ತಿದ್ದರು. ಈ ವೇಳೆ ಅವರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು.

ಆದರೆ ಆ ಬಗ್ಗೆ ಖಚಿತ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಶುಕ್ರವಾರ ಬೆಳಗ್ಗೆ ಜಗ್ತಿಯಾಲ್ ಜಿಲ್ಲೆಯ ಹೊರವಲಯದ ರಾಮಾಜಿಪೇಟ್ ಬಳಿ ಜಮೀರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮೀರ್ ಕಾರು ಜಾರಿ ಅವಘಡ; ಮಳೆಗೆ ನೀರಿನ ಮಟ್ಟವು ಹೆಚ್ಚಾಗಿದ್ದ ಹಿನ್ನೆಲೆ ಜಮೀರ್ ಪ್ರಯಾಣಿಸುತ್ತಿದ್ದ ಕಾರು ಪ್ರವಾಹದ ನೀರಿಗೆ ಜಾರಿ ಅವಘಡ ಸಂಭವಿದೆ ಎಂದು ರಾಯ್ಕಲ್ ಸಹಾಯಕ ಉಪ್ ಪೊಲೀಸ್ ಅಧಿಕಾರಿ ದೇವೇಂದರ್ ತಿಳಿಸಿದ್ದಾರೆ. ಜಾರಿ ಹೋಗಿದ್ದ ಕಾರನ್ನು ಗುರುವಾರ ಪ್ರವಾಹ ಪ್ರದೇಶದಿಂದ ಹೊರತರಲಾಗಿತ್ತು ಎಂದು ಅವರು ವಿವರಿಸಿದ್ದಾರೆ.

ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದರೆ, ಶುಕ್ರವಾರ ಬೆಳಗ್ಗೆ ರಾಮಾಜಿಪೇಟೆ ಗ್ರಾಮದಲ್ಲಿ ಪತ್ರಕರ್ತನ ಶವ ಪತ್ತೆಯಾಗಿದೆ ಎಂದು ಅವರು ಹೇಳಿದರು.

Journalist dies by go to do report for rainfall

ಶಾಸಕ ಎಂ.ಸಂಜಯ್‌ಕುಮಾರ್, ಜಿಲ್ಲಾಧಿಕಾರಿ ಜಿ. ರವಿ, ಪೊಲೀಸ್ ವರಿಷ್ಠಾಧಿಕಾರಿ ಸಿಂಧು ಶರ್ಮಾ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ತನಿಖೆ ನಡೆಯುತ್ತಿದೆ. ಕೊಳೆತ ಸ್ಥಿತಿಯಲ್ಲಿದ್ದ ಶವದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

English summary
Journalist Jameer who had gone missing to report heavy rains in Jagtialtown, was found dead on Friday in Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X