ತೆಲಂಗಾಣ ಮುಖ್ಯಮಂತ್ರಿಯಾಗಿ ಇಂದು ಕೆಸಿಆರ್ ಪ್ರಮಾಣ ವಚನ
Recommended Video

ತೆಲಂಗಾಣದ ಮುಖ್ಯಮಂತ್ರಿಯಾಗಿ ಕೆ ಚಂದ್ರಶೇಖರ್ ರಾವ್ ಇಂದು ಪ್ರಮಾಣವಚನ | Oneindia Kannada
ಹೈದರಾಬಾದ್, ಡಿಸೆಂಬರ್ 13: ತೆಲಂಗಾಣ ರಾಷ್ಟ್ರ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಮಧ್ಯಾಹ್ನ 1.25 ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೈದರಾಬಾದಿನಲ್ಲಿರುವ ರಾಜ ಭವನದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅವರೊಂದಿಗೆ ಬೇರೆ ಯಾವುದೇ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಮಾಹಿತಿ ಲಭ್ಯವಿಲ್ಲ. ಕೆಸಿಆರ್ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
119 ಕ್ಷೇತ್ರಗಳ ತೆಲಂಗಾಣದಲ್ಲಿ ಡಿಸೆಂಬರ್ 07 ರಂದು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಟಿಆರ್ ಎಸ್ ಪಕ್ಷ 88 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್-ಟಿಡಿಪಿ ಮೈತ್ರಿಪಕ್ಷ 21, ಬಿಜೆಪಿ 1 ಮತ್ತು ಎಐಎಂಐಎಂ ಒಟ್ಟು 7 ಸ್ಥಾನಗಳಲ್ಲಿ ಜಯಗಳಿಸಿತ್ತು.












Click it and Unblock the Notifications