ಅಮೆರಿಕಾದಲ್ಲಿ ಗುಂಡೇಟಿಗೆ ಬಲಿಯಾದ ಶ್ರೀನಿವಾಸ್ ಅಂತ್ಯಕ್ರಿಯೆ ಇಂದು

ಅಮೆರಿಕದ ಕನ್ಸಾಸ್ ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹೈದರಾಬಾದ್ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಭೋತ್ಲಾ ಪಾರ್ಥೀವ ಶರೀರದ ಅಂತ್ಯಕ್ರೀಯೆ ಇಂದು (ಫೆ. 28) ಹೈದರಾಬಾದಿನಲ್ಲಿ ನಡೆಯಲಿದೆ.

ಹೈದರಾಬಾದ್, ಫೆಬ್ರವರಿ 28: ಅಮೆರಿಕಾದ ಕನ್ಸಾಸ್ ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹೈದರಾಬಾದ್ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಭೋತ್ಲಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು (ಫೆ. 28) ಹೈದರಾಬಾದಿನಲ್ಲಿ ನಡೆಯಲಿದೆ.

ಶ್ರೀನಿವಾಸ್ ಕುಚಿಭೋತ್ಲಾ ಮೃತ ದೇಹ ಸೋಮವಾರ ಭಾರತಕ್ಕೆ ಆಗಮಿಸಿದ್ದು, ಮಂಗಳವಾರ ಬೆಳಿಗ್ಗೆ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ನಂತರ ಅಲ್ಲಿಂದ ಹೈದರಾಬಾದ್ ನಗರದ ಹೊರವಲಯದಲ್ಲಿರು ಬಚುಪಲ್ಲಿ ನಿವಾಸಕ್ಕೆ ಕೊಂಡೊಯ್ಯಲಾಯಿತು. ಶ್ರೀನಿವಾಸ್ ಪತ್ನಿ ಸುನಾಯಾನ ದುಮಾಲ ಮತ್ತು ಕೆಲ ಸಂಬಂಧಿಕರು ವಿಮಾನದಲ್ಲಿ ಮೃತ ದೇಹದ ಜತೆ ಆಗಮಿಸಿದರು.[ಗೆಟ್ ಔಟ್ ಎಂದು ಕಿರುಚಿ ಅಮೆರಿಕದಲ್ಲಿ ಭಾರತೀಯನ ಹತ್ಯೆ]

Kansas Shootout: Srinivas Kuchibhotla’s funeral today

ಇಂದು ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈಗಾಗಲೇ ಶ್ರೀನಿವಾಸ್ ಅಂತಿಮ ದರ್ಶನ ಪಡೆಯಲು ಸಾವಿರಾರು ಜನ ಆಗಮಿಸಿದ್ದಾರೆ. ಮೃತ ದೇಹಕ್ಕೆ ತೆಲಂಗಾಣ ಸಾರಿಗೆ ಸಚಿವ ಮಹೇಂದ್ರ ರೆಡ್ಡಿ ಅಂತಿಮ ನಮನ ಸಲ್ಲಿಸಿದರು.['ನನಗೆ ಉತ್ತರ ಬೇಕು' ಟ್ರಂಪ್ ಗೆ ಶ್ರೀನಿವಾಸ್ ಪತ್ನಿಯ ಬೇಡಿಕೆ]

Kansas Shootout: Srinivas Kuchibhotla’s funeral today

ಇನ್ನು ಶೂಟೌಟಿನಲ್ಲಿ ಪಾಲ್ಗೊಂಡ ಆರೋಪಿಗಳನ್ನು ಬಂಧಿಸಿ ತಕ್ಷಣ ಶಿಕ್ಷೆ ನೀಡುವಂತೆ ಭಾರತೀಯ ರಾಯಭಾರಿ ಕಚೇರಿ ಒತ್ತಾಯಿಸಿದ್ದು ಅಮೆರಿಕಾ ಸರಕಾರಕ್ಕೆ ಮನವಿಯನ್ನೂ ಸಲ್ಲಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+