• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದಲ್ಲಿ ಕಮಲ ಅರಳಿಸುವ ವಿಶ್ವಾಸದಲ್ಲಿ ಅಧ್ಯಕ್ಷ ಅಮಿತ್ ಶಾ!

|

ಹೈದರಾಬಾದ್, ಜುಲೈ 08: ಕರ್ನಾಟಕದಲ್ಲಿ ಆಡಳಿತಾರೂಢ ಕೈ ತೆನೆ ಸರ್ಕಾರ ಸಚಿವರು, ಶಾಸಕರು ಸರಣಿ ರಾಜೀನಾಮೆಯಿಂದಾಗಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಮತ್ತೊಮ್ಮೆ ಬಿಜೆಪಿ ಸರ್ಕಾರ ಸ್ಥಾಪನೆಯ ವಿಶ್ವಾಸವನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.

ಈ ಸಮಯಕ್ಕೆ ಸರ್ಕಾರ ಉಳಿಸಿಕೊಳ್ಳಲು ಎಚ್ ಡಿ ಕುಮಾರಸ್ವಾಮಿ ಸರ್ಕಾರದ 22 ಸಚಿವರು ರಾಜೀನಾಮೆ ಸಲ್ಲಿಸಿದ್ದು, ಸರಣಿ ರಾಜೀನಾಮೆಯಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ದಾಟಿರುವ ಬಿಜೆಪಿ, ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿದೆ.

ಅಲ್ಪಮತಕ್ಕೆ ಕುಸಿದ ಎಚ್ಡಿಕೆ ಸರ್ಕಾರ, ವಿಧಾನಸಭೆ ಸಂಖ್ಯಾಬಲ?

ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಜೆಡಿಎಸ್ -ಕಾಂಗ್ರೆಸ್ ಪಕ್ಷದ ವಿರುದ್ಧ ಯಡಿಯೂರಪ್ಪ ಅವರು ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ನಿರೀಕ್ಷೆಯಿದೆ. ಈ ಹಿಂದೆ ಕೂಡಾ ಇದೇ ರೀತಿ ಪ್ರಯತ್ನ ಪಟ್ಟು ವಿಫಲರಾಗಿದ್ದರು. ಆದರೆ, ಈ ಬಾರಿ ತಾನಾಗೇ ಈ ಅವಕಾಶ ಒಲಿದು ಬರುವ ಸೂಚನೆ ಸಿಕ್ಕಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಬಲ ಹೆಚ್ಚಳಕ್ಕೆ ಮುನ್ನುಡಿ

ದಕ್ಷಿಣ ಭಾರತದಲ್ಲಿ ಬಿಜೆಪಿ ಬಲ ಹೆಚ್ಚಳಕ್ಕೆ ಮುನ್ನುಡಿ

ಈ ಬಗ್ಗೆ ಮಾತನಾಡಿರುವ ಅಮಿತ್ ಶಾ, ಕರ್ನಾಟಕದಲ್ಲಿ ಬಿಜೆಪಿ ಬಹಮತ ಗಳಿಸಿದ ಬಳಿಕ ಸರ್ಕಾರ ಸ್ಥಾಪನೆಗೆ ತಮ್ಮ ಹಕ್ಕು ಮಂಡಿಸಲಿದೆ, ಶೀಘ್ರದಲ್ಲೇ ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಎಂದಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಬಲ ಹೆಚ್ಚಿಸಲು ಇದು ಮುನ್ನುಡಿಯಾಗಲಿದೆ. ತೆಲಂಗಾಣದಲ್ಲಿ ಬಿಜೆಪಿ ಪರ ಒಲವು ಹೆಚ್ಚಾಗಿದೆ. ಬಿಜೆಪಿ ಸದಸ್ಯತ್ವ ಅಭಿಯಾನದ ಮೂಲಕ ಇನ್ನಷ್ಟು ಬಲ ಸಿಗಲಿದೆ ಎಂದು ಅಮಿತ್ ಶಾ ಹೇಳಿದರು.

ಷಂಶಾಬಾದ್ ನಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಹಿಂತಿರುಗುವಾಗ, ಕರ್ನಾಟಕದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿ, ಆಂಧ್ರಪ್ರದೇಶ, ಕೇರಳದಲ್ಲೂ ಬಿಜೆಪಿ ತನ್ನ ಸಂಖ್ಯೆ ಹೆಚ್ಚಿಸಿಕೊಳ್ಳಲಿದೆ. ಜನತೆ ಬಯಸಿದಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದರು.

ಚುನಾವಣೆ ನಡೆದರೆ ರಾಜ್ಯದ ಅಭಿವೃದ್ಧಿ ಕುಂಠಿತ

ಚುನಾವಣೆ ನಡೆದರೆ ರಾಜ್ಯದ ಅಭಿವೃದ್ಧಿ ಕುಂಠಿತ

ತೆಲಂಗಾಣದಲ್ಲಿ ಬಿಜೆಪಿ ಶೇ 19ರಷ್ಟು ಮತಗಳನ್ನು ಗಳಿಸಿತ್ತು. ಕಳೆದ ಲೋಕಸಭೆ ಚುನಾವಣೆಯಲ್ಲಿ ಶೇಕಡಾವಾರು ಮತಗಳಿಕೆಯಲ್ಲಿ ಬಿಜೆಪಿ ಶೇ 50ಕ್ಕೂ ಅಧಿಕ ಮತ ಗಳಿಸಿದ್ದು, ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅದರಲ್ಲೂ ತೆಲಂಗಾಣದಲ್ಲಿ ಶೇ 50ರಷ್ಟು ಮತಗಳಿಕೆ ಗುರಿ ಹೊಂದಲಾಗಿದೆ ಎಂದರು. ಮತ್ತೆ ಚುನಾವಣೆ ನಡೆದರೆ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

***

ಅಲ್ಪಮತಕ್ಕೆ ಕುಸಿತದ ಮೈತ್ರಿ ಸರ್ಕಾರ

ಅಲ್ಪಮತಕ್ಕೆ ಕುಸಿತದ ಮೈತ್ರಿ ಸರ್ಕಾರ

ಅಲ್ಪಮತಕ್ಕೆ ಕುಸಿತದ ಮೈತ್ರಿ ಸರ್ಕಾರ: ಕಾಂಗ್ರೆಸ್ ಹಾಗೂ ಜೆಡಿಎಸ್ ನ 13 ಶಾಸಕರ ರಾಜೀನಾಮೆ ನಂತರ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಎಲ್ಲಾ 22 ಸಚಿವರ ಸರಣಿ ರಾಜೀನಾಮೆ ನಂತರ ಸರ್ಕಾರ ಉಳಿಯುವುದೋ ಅಥವಾ ಸರ್ಕಾರ ಪತನವಾಗುವುದೋ ಎಂಬ ಆತಂಕ ಮನೆ ಮಾಡಿದೆ. ಮೈತ್ರಿ ಸರ್ಕಾರವನ್ನು ರಕ್ಷಣೆ ಮಾಡಲು 'ಕಾಮರಾಜ ಮಾರ್ಗ' ಅನುಸರಿಸಿ ಎಲ್ಲಾ ಸಚಿವರು ರಾಜೀನಾಮೆ ಪಡೆದು, ಅತೃಪ್ತರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಮತ್ತೊಮ್ಮೆ ಸಂಪುಟ ವಿಸ್ತರಣೆಗೆ ಕುಮಾರಸ್ವಾಮಿ ಮುಂದಾಗಿದ್ದಾರೆ.

ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ

ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ

ಜುಲೈ 08 ರಂದು ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ

ಒಟ್ಟು ಸದಸ್ಯ ಬಲ : 211

ಕಾಂಗ್ರೆಸ್ + ಜೆಡಿಎಸ್ : 104

ಮ್ಯಾಜಿಕ್ ನಂಬರ್ : 106

ಬಿಜೆಪಿ : 105+1(ಪಕ್ಷೇತರ ಎಚ್ ನಾಗೇಶ್)

ಬಿಎಸ್ ಪಿ: 1

ಕಾಂಗ್ರೆಸ್ : 69

ಜೆಡಿಎಸ್ : 34

ಪಕ್ಷೇತರ : 1 (ಕಾಂಗ್ರೆಸ್ ಸೇರಿರುವ ಶಂಕರ್)

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP president, Amit Shah expressed confidence that the party will be able to form the government amidst the raging crisis within the Congress- JD(S) coalition government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more