ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ನಮ್ಮ ಬೆಂಬಲ: ಅಸಾದುದ್ದಿನ್ ಓವೈಸಿ
ಹೈದರಾಬಾದ್, ಏಪ್ರಿಲ್ 16: 'ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನಾವು ಜಾತ್ಯತೀತ ಜನತಾ ದಳ(ಜೆಡಿಎಸ್)ಕ್ಕೆ ಬೆಂಬಲ ನೀಡುತ್ತೇವೆ' ಎಂದು ಎಐಎಂಐಎಂ(All India Majlis-e-Ittehadul Muslimeen) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಹೈದರಾಬಾದಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ನಾವು ಕರ್ನಾಟಕದಲ್ಲಿ ಮೇ 12 ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬದಲಾಗಿ ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ ಮತ್ತು ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇವೆ' ಎಂದು ಅವರು ಹೇಳಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಇದಕ್ಕೂ ಮುನ್ನ ಕರ್ನಾಟಕದಲ್ಲಿ 60 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಎಐಎಂಐಎಂ ಸ್ಪರ್ಧಿಸುತ್ತದೆ ಎಂದು ಸ್ವತಃ ಓವೈಸಿ ಹೇಳಿದ್ದಾರೆ. ಆದರೆ ಇದೀಗ ಸ್ಪರ್ಧೆಯಿಂದ ದೂರವೇ ಉಳಿದು, ಜೆಡಿಎಸ್ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಲು ನಿರ್ಧರಿಸಿದ್ದಾಗಿ ಓವೈಸಿ ಹೇಳಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಗಳೂ ಜನರ ನಿರೀಕ್ಷೆಯನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಆದ್ದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾದ ಪಕ್ಷವೊಂದು ಅಧಿಕಾರಕ್ಕೆ ಬಂದರೆ ದೇಶದ ಹಿತ ಕಾಯಬಹುದು. ಆದ್ದರಿಂದ ನಮ್ಮ ನಾವು ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.












Click it and Unblock the Notifications